ಧಾರವಾಡ

ಎಸ್ಸೆಸ್ಸೆಲ್ಸಿ: ಧಾರವಾಡ ಶಾಲೆಗಳ ವಿದ್ಯಾರ್ಥಿಗಳ ಸಾಧನೆ

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ಮೇ 18
ಧಾರವಾಡ ನಗರದ ವಿವಿಧ ಶಾಲೆಗಳು ಇತ್ತೀಚೆಗೆ ಪ್ರಕಟಗೊಂಡ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿವೆ.
ಇಲ್ಲಿಯ ಶಾಂತಿ ನಿಕೇತನ ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿನಿ ಪೂಜಾ ಪ್ರಭು ಪರೀಕ್ಷೆಯಲ್ಲಿ ಶೇ.88 ರಷ್ಟು ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಶಾಲೆಯ ಫಲಿತಾಂಶವು ಶೇ.88 ರಷ್ಟಾಗಿದೆ. ವಿದ್ಯಾರ್ಥಿನಿಯ ಸಾಧನೆಗೆ ಡಿಡಿಪಿಐ ಬಿ.ಕೆ.ಎಸ್ ವರ್ಧನ್, ಬಿಇಓ ಹುಡೇದಮನಿ, ಶಿಕ್ಷಕರಾದ ಜಿ.ವೈ. ಹೂಗಾರ, ಬಿ.ಡಿ.ಪಾಸಣ್ಣವರ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಪೊಲೀಸ್ ಮಕ್ಕಳ ಶಾಲೆ: ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ಎಸ್ಎಸ್ಎಲ್ಸಿ ಫಲಿತಾಂಶವು ಶೇ.97.22 ರಷ್ಟಾಗಿದೆ. ಪರೀಕ್ಷೆಗೆ ಕುಳಿತ 36 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರೆ, 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ನವೀನಕುಮಾರ ಮಠಪತಿ ಶೇ.94.4 ರಷ್ಟು ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾನೆ. ಪಾಂಡುರಂಗ ಪೂಜಾರ ಶೇ.92.8 ಅಂಕಗಳಿಸಿ ದ್ವಿತೀಯ ಸ್ಥಾನವನ್ನು, ನಂದಕುಮಾರ ವಿಚಾರಿ ಶೇ.90.14 ಅಂಕಗಳಿಸಿ ತೃತೀಯ ಸ್ಥಾನ ಗಳಿಸಿದ್ದಾನೆ.
ಭಾರತ ಹೈಸ್ಕೂಲ್: ಭಾರತ ಹೈಸ್ಕೂಲ್ನ ಎಸ್ಎಸ್ಎಲ್ಸಿ ಫಲಿತಾಂಶವು ಶೇ.86 ರಷ್ಟಾಗಿದೆ. ತೇಜಸ್ವಿನಿ ಪಾಚಂಗಿ ಶೇ.85 ಸರಾಸರಿಯಲ್ಲಿ ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿದ್ದಾಳೆ. ಪ್ರವೀಣ ಸೈದಾಪುರ ಶೇ.80 ಸರಾಸರಿಯಲ್ಲಿ ದ್ವಿತೀಯ ಸ್ಥಾನ, ಪ್ರೀತಿ ಕದಂ ಶೇ.79 ತೃತೀಯ ಪಡೆದಿದ್ದಾರೆ.
ಶೇ. 95 ಸಾಧನೆ: ಜಯದೇವಿತಾಯಿ ಬಾಲಿಕೆಯರ ಪ್ರೌಢ ಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.95 ರಷ್ಟು ಸಾಧನೆ ಮಾಡಿದೆ. 5 ವಿದ್ಯಾರ್ಥಿನಿಯರು ಉನ್ನತ ಶ್ರೇಣಿಯಲ್ಲಿ ಹಾಗೂ 18 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಅಶ್ವಿನಿ ಜಾಧವ ಶೇ.92 ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾಳೆ. ಭಾರತಿ ಹಿರೇಮಠ ಶೇ.82 ಅಂಕ ಪಡೆದು ದ್ವಿತೀಯ ಸ್ಥಾನ ಗಳಿಸಿದ್ದಾಳೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.