27ರಿಂದ ಅಮ್ಮಿನಬಾವಿ ಶ್ರೀ ಪಟ್ಟಾಧಿಕಾರ ಅಮೃತ ಮಹೋತ್ಸವ
ಧಾರವಾಡ: ಬಾಳೆಹೊನ್ನೂರಿನ ರಂಭಾಪುರಿ ಶ್ರೀ ಸಾನ್ನಿಧ್ಯದಲ್ಲಿ ಧಾರವಾಡ ತಾಲೂಕಿನ ಅಮ್ಮಿನಬಾವಿ ಪಂಚಗೃಹ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಶ್ರೀ ಪಟ್ಟಾಧಿಕಾರದ ಅಮೃತ ಮಹೋತ್ಸವ ಮೇ 27ರ ಸಂಜೆ 6ಕ್ಕೆ ಗ್ರಾಮದ ಪಂಚಗೃಹ ಹಿರೇಮಠದ ಆವರಣದಲ್ಲಿ ಜರುಗಲಿದೆ.
ಮೇ 27ರಿಂದ 29ರ ವರೆಗೆ ಕಾಲ ಧರ್ಮ ಜಾಗೃತಿ ಭಾವೈಕ್ಯ ಸಮಾವೇಶ ನಡೆಯಲಿದೆ. ಮೇ 27ರ ಸಂಜೆ 6ಕ್ಕೆ ಪಟ್ಟಾಧಿಕಾರ ಅಮೃತ ಮಹೋತ್ಸವವನ್ನು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ ಬಾಗಲಕೋಟೆ ಜಿಲ್ಲೆ ಕಲಾದಗಿ ಪಂಚಗೃಹ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ಉದ್ಘಾಟಿಸುವರು. ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು, ನವಲಗುಂದ ಪಂಚಗೃಹ ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯರು, ಮಹಾರಾಷ್ಟ್ರದ ನಾಗಣಸೂರ ವಿರಕ್ತಮಠದ ರೇವಣಸಿದ್ಧೇಶ್ವರ ಶ್ರೀ ಉಪದೇಶಾಮೃತ ನೀಡುವರು. ಸಂಸದ ಪ್ರಹ್ಲಾದ್ ಜೋಶಿ, ಶಾಸಕ ಅರವಿಂದ ಬೆಲ್ಲದ, ಮೇಯರ್ ಶಿವು ಹಿರೇಮಠ, ಮಾಜಿ ಶಾಸಕಿ ಸೀಮಾ ಮಸೂತಿ, ಶಂಕರ ಪಾಟೀಲ ಮುನೇನಕೊಪ್ಪ, ಜಿಪಂ ಸದಸ್ಯ ಅಮೃತ ದೇಸಾಯಿ ಆಗಮಿಸುವರು.
ಮೇ 28ರ ಸಂಜೆ 6ಕ್ಕೆ ರಂಭಾಪುರಿ ಶ್ರೀ ಸಾನ್ನಿಧ್ಯದಲ್ಲಿ ಭಾವೈಕ್ಯ ಸಮಾವೇಶ ನಡೆಯಲಿದೆ. ಶಾಸಕ ವಿನಯ ಕುಲಕರ್ಣಿ ಉದ್ಘಾಟಿಸುವರು. ಬಸವನಬಾಗೇವಾಡಿ ಹಿರೇಮಠ ಶಿವಪ್ರಕಾಶ ಶಿವಾಚಾರ್ಯರು, ಸವದತ್ತಿ ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯರು, ಕುಂದಗೋಳ ಪಂಚಗೃಹ ಹಿರೇಮಠದ ಶಿತಿಕಂಠೇಶ್ವರ ಶಿವಾಚಾರ್ಯರು, ನರಗುಂದ ಪಂಚಗೃಹ ಹಿರೇಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಉಪದೇಶಾಮೃತ ನೀಡುವರು. ಮೇ 29ರ ಸಂಜೆ 5ಕ್ಕೆ ಲಕ್ಷ ದೀಪೋತ್ಸವ ನಡೆಯಲಿದೆ. ಬಸವರಾಜ ಹೊರಟ್ಟಿ, ಎನ್.ಎಚ್. ಕೋನರಡ್ಡಿ ಆಗಮಿಸುವರು. ಮೇ 27ರ ಬೆಳಗ್ಗೆ 9ಕ್ಕೆ ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳನ್ನು ಸವದತ್ತಿ ರಸ್ತೆ ಕವಲಗೇರಿ ಕ್ರಾಸ್ನಿಂದ ಅಮ್ಮಿನಬಾವಿ ವರೆಗೆ ಅಡ್ಡಪಲ್ಲಕ್ಕಿಯಲ್ಲಿ ಕರೆತರುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

