ಗದಗ

ಜಾನು ಲಮಾಣಿ ಹೇಳಿಕೆಗೆ ಖಂಡನೆ

Published On :

ಮುಂಡರಗಿ: ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರದಲ್ಲಿ ತಾಪಂ ಮಾಜಿ ಅಧ್ಯಕ್ಷ ಜಾನು ಲಮಾಣಿ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ 2ಟ 3 ವರ್ಷದಿಂದ ಬಿಜೆಪಿ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದು ಖಂಡನೀಯ ಎಂದು ಮುಂಡರಗಿ ಶಹರ ಘಟಕದ ಬಿಜೆಪಿ ಅಧ್ಯಕ್ಷ ರಜನೀಕಾಂತ ದೇಸಾಯಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರಬಸಪ್ಪ ಹಂಚಿನಾಳ ಬಿಜೆಪಿ ಅಧ್ಯಕ್ಷರಾದಲ್ಲಿಂದ ತಮ್ಮ ವೈಯಕ್ತಿಕ ಕೆಲಸ ಹಾಗೂ ಗುತ್ತಿಗೆದಾರಿಕೆ ಕಡೆಗೆ ಹೆಚ್ಚು ಗಮನ ಹರಿಸುತ್ತಿಲ್ಲ. ಪಕ್ಷದ ಏಳ್ಗೆಗಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಅವರ ಶ್ರಮದ ಫಲವಾಗಿಯೇ ಈ ಹಿಂದೆ ಕೇವಲ ಒಂದು ಸ್ಥಾನ ಹೊಂದಿದ್ದ ಮುಂಡರಗಿ ಪುರಸಭೆಯಲ್ಲಿ ಈ ಬಾರಿ ಬಿಜೆಪಿ 8 ಕ್ಷೇತ್ರಗಳಲ್ಲಿ ಗೆದ್ದಿದೆ. ಬಿಜೆಪಿಯಿಂದ ತಾಲೂಕು ಪಂಚಾಯ್ತಿ ಅಧ್ಯಕ್ಷ ಹುದ್ದೆಯ ಲಾಭ ಉಂಡ ಜಾನು ಲಮಾಣಿ ಲಕ್ಷ್ಮೇಶ್ವರದಲ್ಲಿ ಎಷ್ಟು ಸ್ಥಾನ ಪಡೆದಿದ್ದಾರೆ ಎನ್ನುವುದನ್ನು ಅರಿತು ಮಾತನಾಡಲಿ ಎಂದು ದೇಸಾಯಿ ಎಚ್ಚರಿಸಿದ್ದಾರೆ.
ಶಿರಹಟ್ಟಿ ಭಾಗದಲ್ಲಿ ಬಿಜೆಪಿ ಸಂಘಟನೆಗಾಗಿ ಹಂಚಿನಾಳ ಅನೇಕ ಸಭೆ, ಸಮಾರಂಭಗಳನ್ನು ಮಾಡಿದ್ದಾರೆ. ಪ್ರತಿಯೊಂದರಲ್ಲೂ ಅವರು ಸ್ವತಃ ಭಾಗಿಯಾಗಿದ್ದಾರೆ. ಪ್ರಚಾರಕ್ಕಾಗಿ ಸುಳ್ಳು ಹೇಳಿಕೆ ನೀಡುವುದು ಸರಿಯಲ್ಲ ಎಂದು ರಜನೀಕಾಂತ ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.