ಮಕ್ಕಳನ್ನು ಟೀವಿಯಿಂದ ದೂರವಿಡಿ: ಮಡಿವಾಳರ
ನರಗುಂದ: ಆಧುನಿಕ ಜಗತ್ತಿನಲ್ಲಿ ಟೀವಿ ಹಾವಳಿಯಿಂದ ಯುವ ಜನಾಂಗ ಮತ್ತು ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ. ವಿದ್ಯಾರ್ಥಿಗಳು ಇವುಗಳಿಂದ ದೂರವಿರುವಂತೆ ನಿವೃತ್ತ ಶಿಕ್ಷಕ ಜಿ.ಆರ್. ಮಡಿವಾಳರ ಹೇಳಿದರು. ತಾಲೂಕಿನ ರಡ್ಡೇರ ನಾಗನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2012ಟ 13ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ವರ್ಗಾವಣೆಗೊಂಡ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸನ್ಮಾನ ಸ್ವೀಕರಿಸಿದ ನಿವೃತ್ತ ಶಿಕ್ಷಕ ಎಸ್.ಬಿ. ದಾಸರ ಮಾತನಾಡಿದರು. 7ನೇ ತರಗತಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಎಸ್.ಡಿಎಂಸಿ ಅಧ್ಯಕ್ಷ ಬಿ.ಜಿ. ಪಾಟೀಲ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು. ಜಿ.ಬಿ. ಪೂಜಾರ, ಸಾವಿತ್ರಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

