ಶಿರಹಟ್ಟಿ: ಬಿಎಸ್ಸಾರ್ ಗೆಲವು ನಿಶ್ಚಿತ
ಕನ್ನಡಪ್ರಭ ವಾರ್ತೆ, ಮುಂಡರಗಿ, ಏ.1
ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿ.ಎಸ್.ಆರ್. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಶ್ರೀ ಹಳ್ಳೆಪ್ಪನವರ ಗೆಲವು ನಿಶ್ಚಿತ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಗಂಗಣ್ಣ ಮಹಾಂತಶೆಟ್ಟರ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಸೋಮವಾರ ಬಿ.ಎಸ್.ಆರ್. ಪಕ್ಷದ ಅಭ್ಯರ್ಥಿ ಜಯಶ್ರೀ ಹಳ್ಳೆಪ್ಪನವರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ನಂತರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ಬಾರಿ ಮತದಾರರು ಬಿ.ಎಸ್.ಆರ್. ಕಾಂಗ್ರೆಸ್ ಪರ ಒಲವು ತೋರಿಸುತ್ತಿದ್ದಾರೆ. ಶಿರಹಟ್ಟಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಥಳೀಯ ಅಭ್ಯರ್ಥಿಗಳು ಸಿಗದಿರುವ ಹಿನ್ನೆಲೆಯಲ್ಲಿ ಬೇರೆ ತಾಲೂಕಿನಿಂದ ಅಭ್ಯರ್ಥಿಗಳನ್ನು ತರಲಾಗುತ್ತಿದೆ. ಇದು ಅಭ್ಯರ್ಥಿಗಳ ಕೊರತೆಯನ್ನು ಎದ್ದು ತೋರಿಸುತ್ತದೆ. ತಮಗೆ ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ಲೆಕ್ಕಕ್ಕಿಲ್ಲ. ಇವೆರಡನ್ನು ಹೊರತುಪಡಿಸಿ ಕೆಜೆಪಿ ಅಭ್ಯರ್ಥಿ ಎದುರಾಳಿಯಾಗಲಿದ್ದಾರೆ.
ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಲಕ್ಷ್ಮೇಶ್ವರ ಪುರಸಭೆಯಲ್ಲಿ ಬಿ.ಎಸ್.ಆರ್. ಕಾಂಗ್ರೆಸ್ 8 ಸ್ಥಾನಗಳನ್ನು ಮತ್ತು ಶಿರಹಟ್ಟಿಯಲ್ಲಿ 2 ಸ್ಥಾನ ಪಡೆದುಕೊಂಡಿದೆ. ಹೀಗಾಗಿ ನಮಗೆ ಗೆಲ್ಲುವ ಭರವಸೆ ಇದೆ ಎಂದರು. ಜೆಡಿಎಸ್ ಪಕ್ಷದೊಂದಿಗೆ ಬಿ.ಎಸ್.ಆರ್. ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ತಂದೆ ಒಂದು, ಮಗ ಒಂದು ಮಾತನಾಡುತ್ತಾರೆ. ಇದನ್ನು ನಂಬುವುದಾದರೂ ಹೇಗೆ? ಬಿ.ಎಸ್.ಆರ್. ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ತಾವು ಈಗಾಗಲೇ ತಾವು ಶೇ. 50ರಷ್ಟು ಗ್ರಾಮಗಳಲ್ಲಿ ಚುನಾವಣಾ ಪ್ರಚಾರಕೈಗೊಂಡಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
ಸಣ್ಣವೀರಪ್ಪ ಹಳ್ಳೆಪ್ಪನವರ ಮುಂತಾದವರು ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ನಿಯೋಜಿತ ಅಭ್ಯರ್ಥಿ ಜಯಶ್ರೀ ಮಹಾಂತೇಶ ಹಳ್ಳೆಪ್ಪನವರ, ಅಶೋಕ ಪಲ್ಲೇದ, ಮೋದಿನಸಾಬ ಡಂಬಳ, ಶಿವಾನಂದ ದೇಸಾಯಿ, ಶಿವಪ್ಪ ಕಾಳೆ, ವಿರೂಪಾಕ್ಷಪ್ಪ ಹಂಪಣ್ಣವರ, ಕುಮಾರಸ್ವಾಮಿ ಹಿರೇಮಠ, ಮದನಲಾಲ ಭಾಪಣ, ಮೋಹನ ನರಗುಂದ, ಮಂಜುಳಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

