ಗದಗ

ಬಿಜೆಪಿ ಆಡಳಿತದಿಂದ ಜನರಿಗೆ ಬೇಸರ

Published On :

ಗಜೇಂದ್ರಗಡ: ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿಯ ಜನ ವಿರೋಧಿ ನೀತಿಯಿಂದ ಜನತೆ ಬೇಸತ್ತಿದ್ದು, ಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಕಾಂಗ್ರೆಸ್ ನಾಯಕಿ ಶಶಿಕಲಾ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಸ್ಥಳೀಯ ಕಾಂಗ್ರೆಸ್ ಜನ ಸಂಪರ್ಕ ಕಾರ್ಯಾಲಯದಲ್ಲಿ ಇತ್ತೀಚೆಗೆ ಬಿಜೆಪಿ ತೊರೆದ ರೇಣುಕಾ ಮಡಿವಾಳ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ನಾಡಿನ ಅಭಿವೃದ್ಧಿಗೆ ಬಿಜೆಪಿಯೇ ಪರಿಹಾರ ಎಂದು ಘೋಷಿಸಿಕೊಂಡು, ರಾಜ್ಯ ಜನತೆಯ ಅನುಕಂಪದಿಂದ ಅಧಿಕಾರ ಚುಕ್ಕಾಣಿ ಹಿಡಿದ ಬಿಜೆಪಿ, ತಮ್ಮತಮ್ಮಲ್ಲೇ ಕಚ್ಚಾಟ ನಡೆಸಿ, ರಾಜ್ಯದ ಜನತೆ ತಲೆತಗ್ಗಿಸುವಂತೆ ಆಗಿದೆ ಎಂದರು. ಗಜೇಂದ್ರಗಡ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ವೀರಣ್ಣ ಸೊನ್ನದ, ಪುರಸಭೆ ಸದಸ್ಯ ಶಿವರಾಜ ಘೋರ್ಪಡೆ, ಜಿಲ್ಲಾ ಉಪಾಧ್ಯಕ್ಷ ಸುಭಾನಸಾಬ್ ಆರಗಿದ್ದಿ, ಕೊಟ್ರೇಶ್ ಚಿಲಕಾ, ಪ್ರಶಾಂತ ರಾಠೋಡ್, ಉಮೇಶ ರಾಠೋಡ್, ಶ್ರೀಧರ ಚುಂಚಾ, ಅಕ್ಕಮ್ಮ ಕಲಾಲ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.