ಗದಗ

ಬಿಜೆಪಿಗೆ ಕಾಂಗ್ರೆಸ್ ನೇರ ಎದುರಾಳಿ

Published On :

ಕನ್ನಡಪ್ರಭ ವಾರ್ತೆ, ಗದಗ, ಏ. 1
ಬಿಜೆಪಿಯ ನೇರ ಎದುರಾಳಿ ಕಾಂಗ್ರೆಸ್ ಪಕ್ಷವಾಗಿದ್ದು, ಬಿಜೆಪಿ ಕಾರ್ಯಕರ್ತರು ಅಣಬೆಯಂತೆ ಹುಟ್ಟಿಕೊಂಡಿರುವ ಪ್ರಾದೇಶಿಕ ಪಕ್ಷಕ್ಕೆ ಕಿವಿಗೊಡದೇ ಕಾಂಗ್ರೆಸ್ ಪಕ್ಷವನ್ನು ಬಗ್ಗು ಬಡಿಯಲು ಶ್ರಮಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿಹೇಳಿದರು.
ಅವರು ಸೋಮವಾರ ನಗರದ ಜ. ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಗದಗ ವಿಧಾನಸಭಾ ಮತಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಚುನಾವಣೆ ಎಂಬುದು ಯುದ್ಧವಿದ್ದಂತೆ. ಪಕ್ಷದ ಕಾರ್ಯಕರ್ತರು ಈ ಮಹಾಯುದ್ಧದಲ್ಲಿ ಧೈರ್ಯವಾಗಿ ಹೋರಾಡುವ ಮೂಲಕ ಗೆಲವಿನ ಶಿಖರವನ್ನೇರಲು ಸನ್ನದ್ಧರಾಗಬೇಕಿದೆ. 2008ರಲ್ಲಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲಾಗಿತ್ತು. ಹಾಗೆಯೇ 2013ರಲ್ಲೂ ಈ ಫಲಿತಾಂಶ ಮರುಕಳಿಸಬೇಕು. ಬಿಜೆಪಿ ಜಿಲ್ಲೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಜದ ಕಟ್ಟ ಕಡೆಯ ಜನರಿಗೆ ಮುಟ್ಟಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಕೈಗೊಳ್ಳಬೇಕಾಗಿದೆ.
ಅಭಿವೃದ್ಧಿಗೆ ಆದ್ಯತೆ
ಬಿಜೆಪಿ ದಲಿತರ, ರೈತರ, ವಿದ್ಯಾರ್ಥಿಗಳ, ಅಲ್ಪಸಂಖ್ಯಾತರ, ಮಹಿಳಯರು ಸೇರಿದಂತೆ ಎಲ್ಲ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಮಹಿಳೆಯರಿಗಾಗಿ ಭಾಗ್ಯಲಕ್ಷ್ಮೀ ಬಾಂಡ್, ಸುವರ್ಣಭೂಮಿ ಯೋಜನೆಯ ಅಡಿಯಲ್ಲಿ ರೈತರಿಗೆ ರು.  10 ಸಾವಿರ ಧನಸಹಾಯ, ರೈತರ ರು.  25 ಸಾವಿರ ಸಹಕಾರಿ ಸಾಲಮನ್ನಾ, ಅಂಗವಿಕಲರಿಗೆ ರು.  1 ಸಾವಿರ ಹಾಗೂ ವೃದ್ಧರಿಗೆ ರು.  400 ಮಾಸಾಶನ, ಬಡವರ ಆರೋಗ್ಯ ದೃಷ್ಟಿಯಿಂದ ವಾಜಪೇಯಿ ಆರೋಗ್ಯಶ್ರೀ ಯೋಜನೆಗಳನ್ನು ಜಾರಿಗೆ ತರಲಾಗಿದೆ.
2 ಹೊಸ ತಾಲೂಕು ರಚನೆ
ಲಕ್ಷ್ಮೇಶ್ವರ ಹಾಗೂ ಗಜೇಂದ್ರಗಡ ತಾಲೂಕಾಗಬೇಕೆನ್ನುವ ದಶಕಗಳ ಕನಸು ಬಿಜೆಪಿ ಅಧಿಕಾರಾವಧಿಯಲ್ಲಿ ನನಸಾಗಿದೆ. ಜನಪ್ರತಿನಿಧಿಯಾದವನು ಜನಪರ ಅಭಿವೃದ್ಧಿ ಕಾರ್ಯ ಮಾಡಬೇಕು. ಅಂದಾಗ ಮಾತ್ರ ಜನರ ಮನಸ್ಸಿನಲ್ಲಿ ಉಳಿಯಲು ಸಾಧ್ಯ ಎಂದರು.
ಶಾಸಕ ಶ್ರೀಶೈಲಪ್ಪ ಬಿದರೂರ ಮಾತನಾಡಿ, 5 ವರ್ಷದಲ್ಲಿ ನನಗೆ ನೀಡಿದ ಶಾಸಕರ ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗೆ ಉಪಯೋಗಿಸಿದ್ದೇನೆ. ಅಲ್ಲದೇ ಗದಗಟ ಬೆಟಗೇರಿ ಅವಳಿ ನಗರದ ಅಭಿವೃದ್ಧಿಗೆ ಪ್ರಾಮಾಣಿಕನಾಗಿ ಶ್ರಮಿಸಿದ್ದೇನೆ. ಕಾರ್ಯಕರ್ತರು ಯಾವುದೇ ರೀತಿಯ ಟೀಕೆ ಟಿಪ್ಪಣಿಗಳಿಗೆ ಕಿವಿಗೊಡದೇ ಪಕ್ಷವನ್ನು ಬಲಪಡಿಸಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾಧ್ಯಕ್ಷ ಎಂ.ಎಸ್. ಕರಿಗೌಡ್ರ, ಎಂ.ಎಂ. ಹಿರೇಮಠ, ಎಸ್.ವಿ. ಸಂಕನೂರ, ಪ್ರಕಾಶ ಮುಳಗುಂದ, ಸಂಗಮೇಶ ದುಂದೂರ, ತೋಟೋಸಾ ಭಾಂಡಗೆ, ಕಾಂತಿಲಾಲ ಬನ್ಸಾಲಿ, ಜಯಶ್ರೀ ಉಗಲಾಟದ, ವಂದನಾ ವರ್ಣೇಕರ ಮುಂತಾದವರುಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.