ಗದಗ

ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ ಮೂಡಲಿ

Published On :

ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಏ. 1
ಇಂದಿನ ವೈಜ್ಞಾನಿಕ ಯುಗದಲ್ಲಿ ವಿದ್ಯಾರ್ಥಿಗಳು ಕ್ರಿಯಾಶೀಲ ಮನೋಭಾವನೆ ಜತೆಗೆ ಪ್ರಶ್ನೆ ಮಾಡುವುದು ಹಾಗೂ ವಿಶ್ಲೇಷಣಾತ್ಮಕ ಚಿಂತನೆ ಹೊಂದಿರುವುದು ಅವಶ್ಯ ಎಂದು ಹುಬ್ಬಳ್ಳಿಯ ಸಂಕಲ್ಪ ಸೆಮಿಕಂಡಕ್ಟರ್.ನ ಮುಖ್ಯಸ್ಥ ವಿವೇಕ ಪವಾರ ಅಭಿಪ್ರಾಯ ಪಟ್ಟರು.
ಅವರು ಪಟ್ಟಣದ ಕಮಲಾ ಅಗಡಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಿದ ರಾಷ್ಟ್ರಮಟ್ಟದ ವಿದ್ಯಾರ್ಥಿಗಳ ಪ್ರಬಂಧ ಮಂಡನೆ ಇಲ್ಯುಮಿನಾತಿಟ 2013 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕ ಜಗತ್ತಿನಲ್ಲಿ ಹೊಸ ಹೊಸ ಸಂಶೋಧನೆಗಳಿಗೆ ಸಾಕಷ್ಟು ಮನ್ನಣೆ ಇದ್ದು, ವಿದ್ಯಾರ್ಥಿಗಳು ಪ್ರತಿಯೊಂದು ವಿಷಯದಲ್ಲಿ ಸಾಕಷ್ಟು ಅಧ್ಯಯನ ಮಾಡಬೇಕು. ಇದರಿಂದ ಆ ವಿಷಯದ ಮೇಲೆ ವಿಶ್ಲೇಷಣೆಗಳನ್ನು ಮಾಡುವ ಶಕ್ತಿ ಲಭಿಸುತ್ತದೆ.
ಇಂದಿನ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾರಂಪರಿಕ ಶಿಕ್ಷಣ ಪದ್ಧತಿಯಂತೆ ಬೋಧಿಸದೆ ಅವರ ತಿಳಿವಳಿಕೆ ಮತ್ತು ಆಲೋಚನೆಗೆ ಶಕ್ತಿಗೆ ತಕ್ಕಂತೆ ಬೋಧನೆ ಮಾಡಿದರೆ ಉತ್ತಮ ಶಿಕ್ಷಣ ನೀಡಿದಂತಾಗುತ್ತದೆ. ಇಲ್ಲವಾದಲ್ಲಿ ನೀರಿನಲ್ಲಿ ಹೋಮ ಮಾಡಿದಂತೆ ಎಂದರು. ಪ್ರಾಚಾರ್ಯ ಡಾ. ಅಶೋಕ ಚಾಪಗಾಂವ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಮಹಾವಿದ್ಯಾಲಯವು ಅತ್ಯಂತ ಯಶಸ್ವಿಯಾಗಿ ಇಲ್ಯುಮಿನಾತಿ ಕಾರ್ಯಕ್ರಮವನ್ನು ಸಂಘಟಿಸುತ್ತಾ ಬಂದಿದ್ದು, ರಾಜ್ಯ ಮತ್ತು ಹೊರರಾಜ್ಯದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದ್ದು ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಸಮಾರಂಭದಲ್ಲಿ ಡಾ. ಪಿ.ಡಿ.ಅಜಗಾಂವಕರ್, ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ. ಪಿ.ಜಿ.ಪಾಟೀಲ, ಪ್ರೊ. ಉಳ್ಳಾಗಡ್ಡಿ ಉಪಸ್ಥಿತರಿದ್ದರು.
 ವಿಜಯ ಮಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ದಯಾನಂದ ಬಡಿಗಣ್ಣವರ ವಂದಿಸಿದರು. ಕೊನೆಯಲ್ಲಿ ಇಲ್ಯುಮಿನಾತಿಟ 2013 ರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.