ಗದಗ

ಹೊರಗಿನವರಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಸೋಲು ಖಚಿತ: ನಾಡಗೌಡ್ರ

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ಏ. 3
ವಿಧಾನಸಭಾ ಚುನಾವಣೆಯಲ್ಲಿ ಶಿರಹಟ್ಟಿ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷವು ಈಗಾಗಲೇ ಹೊರಗಿನವರಿಗೆ ಟಿಕೆಟ್ ನಿಗದಿಪಡಿಸಿದೆ ಎಂದು ಹೇಳಲಾಗುತ್ತಿದ್ದು, ಅದು ದೃಢಪಟ್ಟರೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಖಚಿತ ಎಂದು ಮುಂಡರಗಿ ತಾಲೂಕು ಬ್ಲಾಕ್ ಕಾಂಗ್ರೆಸ್,ನ ಮಾಜಿ ಅಧ್ಯಕ್ಷ ವಿ.ಎಲ್. ನಾಡಗೌಡ್ರ ಹೇಳಿದರು.
ಅವರು ಬುಧವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂಡರಗಿ ತಾಲೂಕು ವಿಧಾನಸಭಾ ಕ್ಷೇತ್ರವನ್ನು ಕಳೆದುಕೊಂಡು ಅನಾಥವಾಗಿದೆ. ಈ ತಾಲೂಕಿನ ಅರ್ಧಭಾಗ ರೋಣ ಮತಕ್ಷೇತ್ರಕ್ಕೆ ಮತ್ತು ಇನ್ನರ್ಧ ಭಾಗ ಶಿರಹಟ್ಟಿ ಮೀಸಲು ಕ್ಷೇತ್ರಕ್ಕೆ ಸೇರಿರುವುದರಿಂದ ಇಲ್ಲಿನ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿಲ್ಲ. ಕಾರಣ ಅಭಿವೃದ್ಧಿಯ ದೃಷ್ಟಿಯಿಂದ ಶಿರಹಟ್ಟಿ ಮೀಸಲು ವಿಧಾನಸಭಾ ಅಖಂಡವಾದ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕು.
ಈ ಹಿಂದೆ ತಾಲೂಕಿನ ಶಿಂಗಟಾಲೂರ ಕ್ಷೇತ್ರದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ಬ್ಲಾಕ್ ಕಮಿಟಿಯ ಅಧ್ಯಕ್ಷರುಗಳು ಮತ್ತು ಹಿರಿಯ ಮುಖಂಡರ ಹಾಗೂ ಕೆಪಿಸಿಸಿ ಸದಸ್ಯರ ಸಮ್ಮುಖದಲ್ಲಿ ಸಭೆ ನಡೆಸಿ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡುವಂತೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೂ ಶಿರಹಟ್ಟಿ ಕ್ಷೇತ್ರಕ್ಕೆ ಬೇರೆ ತಾಲೂಕಿನವರ ಹೆಸರು ಕೇಳಿಬರುತ್ತಿರುವುದು ಸರಿಯಲ್ಲ.
ಈ ಕುರಿತು ಹೈಕಮಾಂಡ್ ಮತ್ತೊಮ್ಮೆ ಪರಿಶೀಲಿಸಿ ಕ್ಷೇತ್ರದವರಿಗೆ ಆದ್ಯತೆ ನೀಡುವುದರಿಂದ ಪಕ್ಷದ ಗೆಲುವಿಗೆ ಅನುಕೂಲವಾಗುತ್ತದೆ. ಈಗಾಗಲೇ ರಾಮಕೃಷ್ಣ ದೊಡ್ಡಮನಿ, ಸುಜಾತಾ ದೊಡ್ಡಮನಿ, ಭೀಮಸಿಂಗ್ ರಾಠೋಡ ಅವರ ಹೆಸರುಗಳು ಕೇಳಿಬರುತ್ತಿದ್ದು, ಸ್ಥಳೀಯರಿಗೆ ಹಾಗೂ ಕ್ಷೇತ್ರವನ್ನು ಪ್ರವಾಸ ಮಾಡಿ ಅಲ್ಲಿನ ಜನರ ನಾಡಿಮಿಡಿತವನ್ನು ಬಲ್ಲವರಿಗೆ ಟಿಕೆಟ್ ದೊರೆಯಬೇಕೆನ್ನುವುದು ನನ್ನ ಉದ್ದೇಶವಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.