ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸ: ಕಾತರಕಿ
ಕನ್ನಡಪ್ರಭ ವಾರ್ತೆ, ನರಗುಂದ, ಏ. 4
ಕಾಂಗ್ರೆಸ್ ಪಕ್ಷ ನರಗುಂದ ಕ್ಷೇತ್ರದ ಟಿಕೆಟ್‌ನ್ನು ಅಂತಿಮಗೊಳಿಸಿದೆ. ಆದರೆ, ಬಿಡುಗಡೆಗೊಳಿಸಿಲ್ಲ. ಹಾಗಾಗಿ ಸದ್ಯ ಕೇಳಿ ಬರುತ್ತಿರುವ ಹೆಸರಿನ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನಗೆ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ನರಗುಂದ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರೊ. ಎಸ್.ಎನ್. ಕಾತರಕಿ ಹೇಳಿದರು.
ಅವರು ಬುಧವಾರ ತಮ್ಮ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಟಿಕೆಟ್ ಅಂತಿಮಗೊಂಡಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇದರಿಂದ ಸಹಜವಾಗಿ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಆ ಗೊಂದಲವನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಈ ಸಭೆ ಕರೆಯಲಾಗಿದೆ. ನರಗುಂದ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಈಗಾಗಲೇ 4 ಜನರು ಅರ್ಜಿ ಸಲ್ಲಿಸಿದ್ದೇವೆ ಎಂದರು.
ನನಗೆ ಟಿಕೆಟ್ ಸಿಗುವ ಸಾಧ್ಯತೆ ನಿಚ್ಚಳವಾಗಿದೆ. ಈ ವಿಷಯವಾಗಿ ನಾನು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದೇನೆ. ಅವರಿಂದ ಸಕಾರಾತ್ಮಕವಾದ ಅಭಿಪ್ರಾಯಗಳು ವ್ಯಕ್ತವಾಗಿವೆ. ಆದರೆ, ಬೇರೊಬ್ಬರಿಗೆ ಟಿಕೆಟ್ ಲಭ್ಯವಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆಯಾದರೂ ನನಗೆ ಪಕ್ಷದ ವರಿಷ್ಠರ ಮೇಲೆ ವಿಶ್ವಾಸವಿದೆ. ಅದಕ್ಕಾಗಿ ನಾನು ಪಕ್ಷವು ಅಂತಿಮ ಪಟ್ಟಿ ಬಿಡುಗಡೆಗೊಳಿಸುವವರೆಗೂ ಕಾಯುತ್ತೇನೆ ಎಂದು ಹೇಳಿದರು.
ಪಟ್ಟಿ ಬಿಡುಗಡೆಯಾದ ನಂತರ ನರಗುಂದ ಕ್ಷೇತ್ರದ ಎಲ್ಲ ಕಾರ್ಯಕರ್ತರೊಂದಿಗೆ ಮತ್ತೊಮ್ಮೆ ಚರ್ಚಿಸಿ, ದೊಡ್ಡ ಸಭೆಯನ್ನು ಏರ್ಪಡಿಸಿ, ಅವರೆಲ್ಲ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಮುಂದಿನ ತೀರ್ಮಾನವನ್ನು ಅಂದೇ ತೆಗೆದುಕೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬಿ.ಬಿ. ನೀಲರಡ್ಡಿ, ರೋಣ ಭಾಗದ ಸುರೇಶಗೌಡ ಪಾಟೀಲ, ಅಶೋಕರೆಡ್ಡಿ ಹದಲಿ ಹಲವಾರು ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

