ಗದಗ

ಜನತೆ ಜೆಡಿಎಸ್ ಬೆಂಬಲಿಸಲಿದ್ದಾರೆ: ಹಾವಿನಾಳ

Published On :

ಗಜೇಂದ್ರಗಡ: ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನ ಪಕ್ಷಪಾತದಿಂದ ರಾಜ್ಯದ ಜನತೆ ರೋಸಿ ಹೋಗಿದ್ದು, ಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಜೆಡಿಎಸ್‌ಗೆ ಸಂಪೂರ್ಣ ಬೆಂಬಲಿಸಲಿದ್ದಾರೆಂದು ಜೆಡಿಎಸ್ ಮುಖಂಡ ರವಿಕುಮಾರ ಹಾವಿನಾಳ ಹೇಳಿದರು.
ಅವರು ಶನಿವಾರ ಸಮೀಪದ ನಾಗರಸಕೊಪ್ಪ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತೊರೆದ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು, ಜೆಡಿಎಸ್ ನಿಯೋಜಿತ ಅಭ್ಯರ್ಥಿ ಹೇಮಗಿರೀಶ ಹಾವಿನಾಳ ಪರ ಮನೆ ಮನೆಗೆ ತೆರಳಿ ಮತಯಾಚಿಸಿದ ನಂತರ ಮಾತನಾಡಿದರು. ರಾಷ್ಟ್ರೀಯ ಪಕ್ಷಗಳಿಂದ ಅಭಿವೃದ್ಧಿ ಅಸಾಧ್ಯ ಎಂಬುದು ಜನತೆಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ತತ್ವ, ಸಿದ್ದಾಂತ ಹಾಗೂ ಎಚ್.ಡಿ. ಕುಮಾರಸ್ವಾಮಿಯವರು ಕೇವಲ 20 ತಿಂಗಳು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಜನತೆಗೆ ನೀಡಿದ ಸಂಧ್ಯಾಸುರಕ್ಷಾ, ಶಾಲಾ ಮಕ್ಕಳಿಗೆ ಸೈಕಲ್ ವಿತರಣೆಯಂತಹ ವಿನೂತನ ಯೋಜನೆಯನ್ನು ಜಾರಿಗೊಳಿಸುವುದರ ಮೂಲಕ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಪರಿಣಾಮ ರಾಜ್ಯದ ಯುವ ಶಕ್ತಿ ಕುಮಾರಸ್ವಾಮಿಯವರ ನಾಯಕತ್ವದ ಮೇಲೆ ವಿಶ್ವಾಸ ಹೊಂದಿ, ಸಮರೋಪಾದಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಚುನಾವಣೆಯಲ್ಲಿ ರೋಣ ಮತಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿ, ಜೆಡಿಎಸ್ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದರು. ನಾಗರಸಕೊಪ್ಪ ಗ್ರಾಮದ ಶಿವಪ್ಪ ಪೂಜಾರ, ಸಂಗಪ್ಪ ಚವ್ಹಾಣ, ಉಮೇಶ ಚವ್ಹಾಣ, ನೇಮಪ್ಪ ಚವ್ಹಾಣ, ಚತ್ರಪ್ಪ ಚವ್ಹಾಣ, ರಮೇಶ ರಾಠೋಡ, ಬೀಳಪ್ಪ ಚವ್ಹಾಣ ಮುಂತಾದವರು ಜೆಡಿಎಸ್ ಸೇರ್ಪಡೆಗೊಂಡರು. ಕೊಟ್ರೇಶ ಮುತ್ತೂರ, ಈರಣ್ಣ ಮಜ್ಜಿಗಿ, ಮಲ್ಲಣ್ಣ ಹಣಜಿ, ನೀಲಪ್ಪ ನಂದಿಕಾವಿ, ನಾಗರಾಜ ಯಳವತ್ತಿ, ಶಿವಾನಂದ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.