ಮತದಾನ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಜಿಲ್ಲಾಧಿಕಾರಿ
ರೋಣ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ರೋಣ ಮತಕ್ಷೇತ್ರದ ಪುರುಷರು ಹಾಗೂ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಯಶಸ್ವಿಗೊಳಿಸಬೇಕು. ಅದಕ್ಕಾಗಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಹೇಳಿದರು. ಅವರು ಶನಿವಾರ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಗ್ರಾಮೀಣ ಭಾಗಗಳಲ್ಲಿ ಜನತೆಗೆ ಮತದಾನದ ಅರಿವು ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಜಿಲ್ಲಾ ಪಂಚಾಯಿತಿ ಸಿಇಓ ವೀರಣ್ಣ ತುರಮುರಿ ನೇತೃತ್ವದಲ್ಲಿ ತಂಡವನ್ನು ರಚಿಸಿ ಪ್ರತಿ ತಾಲೂಕು ಕೇಂದ್ರಗಳಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಸಹಾಯಕರಿಗೆ ತರಬೇತಿ ಶಿಬಿರವನ್ನು ನಡೆಸುವುದರ ಮೂಲಕ ಜಾಗೃತಿ ಮೂಡಿಸಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಮತದಾನದ ಜಾಗೃತಿಯನ್ನು ಮೂಡಿಸಲು ಜಿಲ್ಲಾ ಆಡಳಿತ ಸಿದ್ಧವಾಗಿದ್ದು, ಪ್ರತಿ ಹಳ್ಳಿಗಳಿಗೂ ಮತದಾನದ ಬಗ್ಗೆ ಜಾಗೃತಿ ಕಲಾ ತಂಡಗಳನ್ನು ಕಳಿಸಿ ಜಾನಪದ ನೃತ್ಯ ಮತ್ತು ಬೀದಿನಾಟಕಗಳ ಮೂಲಕ ಜನರಲ್ಲಿ ಮತದಾನದ ಮಹತ್ವವನ್ನು ತಿಳಿಸಲಾದ್ದು, ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತದಾನದ ಗುರಿಯನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳು ಕಾರ್ಯ ಪ್ರಯುಕ್ತರಾಗಿದ್ದಾರೆ. ಮುಖ್ಯವಾಗಿ ಈ ಸಾರಿ ಮತದಾರರ ಮನೆಗಳಿಗೆ ಸಿಬ್ಬಂದಿ ತೆರಳಿ ಮತದಾನದ ಚೀಟಿಗಳನ್ನು ವಿತರಿಸಲಿದ್ದಾರೆಂದರು. ತಹಸೀಲ್ದಾರ್ ಎಸ್.ಆರ್.ಕಡಿವಾಲ, ಉಪ ತಹಸೀಲ್ದಾರ್ ಎನ್.ಎಸ್. ಕೂಡಲ, ಸಿಪಿಐ ಮಲ್ಲನಗೌಡ ನಾಯಕ, ನರೆಗಲ್ಲ ಪಿಎಸ್ಐ ಎಸ್.ಎನ್. ಅಂಬಿಗೇರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

