ಗದಗ

ಸದೃಢ ಆರೋಗ್ಯಕ್ಕೆ ಯೋಗ ಅವಶ್ಯ

Published On :

ಕನ್ನಡಪ್ರಭ ವಾರ್ತೆ, ಗದಗ, ಏ. 7
ಸದೃಢ ಆರೋಗ್ಯಕ್ಕೆ ಯೋಗ ಅತ್ಯವಶ್ಯಕವಾಗಿದ್ದು, ಪ್ರತಿಯೊಬ್ಬರೂ ಈ ಯೋಗದಲ್ಲಿ ಪಾಲ್ಗೊಳ್ಳುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ ಎಂದು ಪ್ರಾ. ಎಸ್.ಎಸ್. ಹಿರೇಮಠ ಹೇಳಿದರು.
ಈಚೆಗೆ ಅವರು ನಗರದ ಕೆಎಲ್‌ಇ ಸಂಸ್ಥೆಯ ಜೆ.ಟಿ. ಮಹಾವಿದ್ಯಾಲಯದಲ್ಲಿ ಡಿಜಿಎಂ ಆಯುರ್ವೇದಿಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಗದಗ ಇದರ ಸಹಯೋಗದೊಂದಿಗೆ ನಡೆದ ಸರ್ಟಿಫಿಕೇಟ್ ಕೋರ್ಸ್ ಇನ್ ಯೋಗಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಯೋಗವು ಮಾನವನ ಶರೀರದ ಬೆಳವಣಿಗೆಗೆ ಸಹಕಾರಿಯಾಗಿದೆ. ಯಾವುದೇ ರೋಗಗಳು ಈ ಯೋಗದಿಂದ ದೂರ ಮಾಡಬಹುದಾಗಿದೆ. ಪ್ರತಿಯೊಬ್ಬರೂ ಯೋಗ, ವ್ಯಾಯಾಮದಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಯೋಗ ಮಾಡುವುದರಿಂದ ನಮ್ಮಲ್ಲಿರುವ ಅಶಾಂತಿಯನ್ನು ದೂರಮಾಡಬಹುದಾಗಿದೆ.  ಮಾನಸಿಕ ಶಕ್ತಿ ಹೆಚ್ಚಿಸಿಕೊಳ್ಳಬಹುದಾಗಿದ್ದು, ವಿದ್ಯಾರ್ಥಿಗಳು ಯೋಗ ಮಾಡುವಂತೆ ತಿಳಿಸಿದರು. ಅತಿಥಿಗಳಾಗಿ ಆಗಮಿಸಿದ್ದ ಡಿಜಿಎಂ ಆಯುರ್ವೇದಿಕ ವೈದ್ಯಕೀಯ ಮಹಾವಿದ್ಯಾಲಯದ ಡಾ. ಜಿ.ಎಸ್. ಹಿರೇಮಠ ಮಾತನಾಡಿ, ಯೋಗದ ಮಹತ್ವವನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳುವುದಲ್ಲದೇ ಅದರ ಸದುಪಯೋಗವನ್ನು ಜೀವನ ಪೂರ್ತಿ ಪಡೆದುಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್.ಎಸ್. ಯಂಕಂಚಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಕೋರ್ಸ್‌ಗಳು ಅವಶ್ಯ. ಯೋಗವು ದೈಹಿಕ ಆರೋಗ್ಯ ಸಮತೋಲನ ಕಾಯ್ದುಕೊಳ್ಳುವುದರ ಮೂಲಕ ಮನಸ್ಸನ್ನು ಪ್ರಪುಲ್ಲವಾಗಿಸುತ್ತದೆ ಎಂದರು.
ಶ್ರೀದೇವಿ ಓಂಕಾರಿ, ಪರಮೇಶ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜ್ಯೋತಿ ಬಗಲಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಯೋಗ ವಿಭಾಗದ ಕಾರ್ಯಾಧ್ಯಕ್ಷ ಪ್ರೊ. ಎಸ್.ಎಸ್. ನರಸೀನವರ ಸ್ವಾಗತಿಸಿದರು. ಗೀತಾ ಕಲ್ಯಾಣಿ ನಿರೂಪಿಸಿದರು. ಕಾರ್ಯದರ್ಶಿ ಜ್ಯೋತಿ ನಂದಿಕೋಲ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.