ಗದಗ

ಚುನಾವಣೆ: ಪಥ ಸಂಚಲನ

Published On :

ಕನ್ನಡಪ್ರಭ ವಾರ್ತೆ, ನರೇಗಲ್ಲ, ಏ. 7
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆ ಸುವ್ಯವಸ್ಥಿತ, ಶಿಸ್ತುಬದ್ಧ ಹಾಗೂ ಮುಕ್ತವಾಗಿ ಸಾರ್ವಜನಿಕರು ತಮ್ಮ ಅಮೂಲ್ಯ ಮತವನ್ನು ಚಲಾಯಿಸಲು ಅವಕಾಶ ನೀಡುವ ದೃಷ್ಟಿಯಿಂದ ಚುನಾವಣಾ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬಿಎಸ್‌ಎಫ್ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಭಾನುವಾರ ನರೇಗಲ್ಲ ಪಟ್ಟಣದಲ್ಲಿ ಪಥ ಸಂಚಲನ ನಡೆಸಿದರು. ಗದಗ ಜಿಲ್ಲೆಯಲ್ಲಿನ ಎಲ್ಲ ವಿಧಾನಸಭಾ ಮತಕ್ಷೇತ್ರಗಳಿಗಿಂತ ಹೆಚ್ಚು  ಮಹತ್ವ ಪಡೆದುಕೊಂಡಿರುವ ರೋಣ ಮತಕ್ಷೇತ್ರ ಹೆಚ್ಚಿನ ಮತದಾರರನ್ನು ಹೊಂದಿರುವ ಕ್ಷೇತ್ರವಾಗಿದೆ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗಡಿ ಭದ್ರತಾ ಪಡೆಯ ಯೋಧರು ಆಗಮಿಸಿದ್ದರು.
ನಗರದ ಪಿಎಸ್‌ಐ ಎಸ್.ಎನ್. ಅಂಬಿಗೇರ ನೇತೃತ್ವದಲ್ಲಿ ಪಟ್ಟಣದ ಪೊಲೀಸ್ ಠಾಣೆಯಿಂದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ಜರುಗಿತು. 72 ಬಿಎಸ್‌ಎಫ್ ಯೋಧರು, 50 ಡಿಎಆರ್. ಮತ್ತು ನರೇಗಲ್ಲ ಠಾಣೆಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.