ಗದಗ

ಸುವ್ಯವಸ್ಥಿತ ಆಡಳಿತಕ್ಕೆಕಾಂಗ್ರೆಸ್ ಬದ್ಧ: ಎಚ್ಕೆ

Published On :

ಕನ್ನಡಪ್ರಭ ವಾರ್ತೆ, ಗದಗ, ಏ. 8
ರಾಜ್ಯದಲ್ಲಿ ಮತ್ತೆ ಸುವ್ಯವಸ್ಥಿತ ಆಡಳಿತ ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಸೋಮವಾರ ನಗರದ ಎಪಿಎಂಸಿ ಯಾರ್ಡ್ ಬಳಿ ಇರುವ ಕೆ.ಎಚ್. ಪಾಟೀಲ ಸಭಾಭವನದಲ್ಲಿ ರಾಜೀವಗಾಂದಿ ಪಂಚಾಯತ್ ರಾಜ್ ಸಂಘಟನೆ ಗದಗ ತಾಲೂಕು ಘಟಕದ ವತಿಯಿಂದ ನೋಂದಾಯಿತ ಸದಸ್ಯರ ಗ್ರಾಮ ಘಟಕದ ಪದಾಧಿಕಾರಿಗಳ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ರಾಜ್ಯದ ರಾಜಕೀಯ ವ್ಯವಸ್ಥೆ ತುಂಬಾ ಹದಗೆಟ್ಟಿದೆ. ಐದು ವರ್ಷ ಆಳಿದ ಬಿಜೆಪಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಾಡುವ ಮೂಲಕ ರಾಜ್ಯವನ್ನು ಅಧೋಗತಿಗೆ ತಳ್ಳಿದೆ. 1.50 ಲಕ್ಷ ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಗಣಿಗಾರಿಕೆ ನಡೆಸುವ ಮೂಲಕ ರಾಜ್ಯದ ಅಮೂಲ್ಯ ಸಂಪತ್ತನ್ನು ದೋಚಿ, ರಾಜ್ಯವನ್ನು ಅವನತಿಯ ಹಾದಿ ಹಿಡಿಸಿದೆ ಎಂದು ದೂರಿದರು.
ಮುಖ್ಯಮಂತ್ರಿಯೊಬ್ಬರು ಹಗರಣಗಳ ಹಿನ್ನೆಲೆಯಲ್ಲಿ ಜೈಲಿಗೆ ಹೋಗಿ ಬಂದಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾತ್ರ. ಇಂಥ ಹೊಲಸು ರಾಜಕೀಯದ ಮೂಲಕ ರಾಜ್ಯವನ್ನು ಬಿಜೆಪಿ ದಿಕ್ಕು ತಪ್ಪಿಸಿದೆ. ರಾಜ್ಯದ ಅರಣ್ಯ ಸಂಪತ್ತು, ಗಣಿಗಳನ್ನು ಸ್ವಹಿತಾಸಕ್ತಿಗೆ ಮಾರಿಕೊಂಡು ಜನರ ಆಕ್ರೋಶಕ್ಕೆ ಗುರಿಯಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಬೆಂಬಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಟ ಕಲಿಸುತ್ತಾರೆ ಎಂದರು. ಮಾಜಿ ಸಚಿವ ಬಿ.ಆರ್. ಯಾವಗಲ್ ಪಕ್ಷ ಸಂಘಟನೆ ಕುರಿತು ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.