ಗದಗ

ಜನ ಕೊಡುವ ಅಧಿಕಾರ ಅಭಿವೃದ್ಧಿಗೆ ಬಳಸುವೆ: ಎಚ್ಕೆ

Published On :

ಗದಗ: ಜನ ಕೊಡುವ ಅಧಿಕಾರವನ್ನು ಅಭಿವೃದ್ಧಿಗೆ ಬಳಸುವ ಮೂಲಕ ಕ್ಷೇತ್ರದ ಸಮಗ್ರ ಪ್ರಗತಿಗೆ ಶ್ರಮಿಸುವುದಾಗಿ ಮಾಜಿ ಸಚಿವ, ಗದಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ. ಪಾಟೀಲ ಹೇಳಿದರು.
ಗದಗ ವಕೀಲರ ಸಂಘದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ತಾವು ಕಾನೂನು ಸಚಿವರಾಗಿದ್ದಾಗ ಮೊದಲ ಬಾರಿಗೆ ಜಾರಿಗೆ ತಂದ ಕಾನೂನು ನೀತಿ ಗದಗ ಬಾರ್ ಅಸೋಸಿಯೇಷನ್ ಸೇರಿದಂತೆ ರಾಷ್ಟ್ರಾದ್ಯಂತ ಪ್ರಶಂಸೆಗೆ ಒಳಗಾಯಿತು. ಕಾನೂನು ವಿಶ್ವವಿದ್ಯಾಲಯ ಸ್ಥಾಪನೆ, ಹುಬ್ಬಳ್ಳಿ-ಧಾರವಾಡ ಹಾಗೂ ಗುಲ್ಬರ್ಗಾದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ, ನ್ಯಾಯಾಲಯಗಳಲ್ಲಿ ಸಾಕ್ಷಿದಾರರಿಗೆ ಭದ್ರತೆ ಜತೆ ಸೌಲಭ್ಯ ಸೃಷ್ಟಿಗಾಗಿ ವಿಟ್ನೆಸ್ ಲಾಂಜ್ ಸ್ಥಾಪಿಸಲು ಕ್ರಮ ಕೈಗೊಂಡದ್ದನ್ನು ಮೆಲುಕು ಹಾಕಿದರು.
ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ ಕಳಂಕರಹಿತ ಆಡಳಿತಕ್ಕಾಗಿ ಶುದ್ಧ ಹಸ್ತದ ಅಭ್ಯರ್ಥಿಗಳನ್ನು ಬೆಂಬಲಿಸಿ. ನಿಮ್ಮ ಬೆಂಬಲಕ್ಕೆ ಎಚ್.ಕೆ. ಪಾಟೀಲ ಅರ್ಹರಿದ್ದಾರೆ. ನಿಮ್ಮೆಲ್ಲರ ಪ್ರೋತ್ಸಾಹ, ಬೆಂಬಲ ಗದಗ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು. ಹಿರಿಯ ವಕೀಲ ಎಸ್.ಕೆ. ಮೇಟಿ, ಎಂ.ಟಿ. ಮಿಸ್ಕಿನ, ಮಂಜುನಾಥ ರಾಮೇನಳ್ಳಿ, ಸಿ.ಆರ್. ವಡಕಣ್ಣವರ ವೇದಿಕೆ ಮೇಲಿದ್ದರು. ಎಸ್.ಕೆ. ಪಾಟೀಲ, ಎ.ಎಸ್. ಸೂಡಿ, ಮೌಲ್ವಿ, ಕೆ.ಎಲ್. ಪವಾರ, ವಕೀಲರ ಸಂಘದ ಪದಾಧಿಕಾರಿಗಳು, ಎಲ್ಲ ಸದಸ್ಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.