ಹಣ ದುರ್ಬಳಕೆ ಆರೋಪ: ಗುಂಪು ಘರ್ಷಣೆ
ಲಕ್ಷ್ಮೇಶ್ವರ: ಪಟ್ಟಣದ ಪ್ರಸಿದ್ಧ ಯಾತ್ರಾ ಸ್ಥಳವಾದ ದೂದಪೀರಾ ದರ್ಗಾಕ್ಕೆ ಸಂಬಂಧಿಸಿದ ಹಣಕಾಸಿನ ವ್ಯವಹಾರದಲ್ಲಿ ಸದ್ಯದ ದರ್ಗಾ ಕಮಿಟಿ ಹಣ ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯೆ ಶುಕ್ರವಾರ ತಡರಾತ್ರಿ ಘರ್ಷಣೆ ಸಂಭವಿಸಿದೆ. ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಜಗಳ ತಾರಕಕ್ಕೆ ತೆರಳಿ, ಪರಸ್ಪರ ಹೊಡೆದಾಡಿದ್ದಾರೆ. ದರ್ಗಾದಲ್ಲಿ ನಡೆಯುತ್ತಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಒಂದು ಗುಂಪಿನ ಸದಸ್ಯರು ಪ್ರಶ್ನಿಸಿದಾಗ ಕುಪಿತಗೊಂಡ ಮತ್ತೊಂದು ಗುಂಪಿನ ಸದಸ್ಯರು ಹಲ್ಲೆ ಮಾಡಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಮತ್ತೊಂದು ಗುಂಪಿನವರೂ ದಾಳಿ ಆರಂಭಿಸಿದ್ದಾರೆ. ಈ ಹೊಡೆದಾಟಕ್ಕೆ ಸಂಬಂಧಿಸಿ ಒಟ್ಟು 17 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಲಕ್ಷ್ಮೇಶ್ವರ ಠಾಣಾಧಿಕಾರಿ ಪಿ. ವೆಂಕಟಸ್ವಾಮಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

