ಮೆಣಸಿನಕಾಯಿಗೆ ಕೆಜೆಪಿ ಟಿಕೆಟ್: ಸಂಭ್ರಮ
ಗಜೇಂದ್ರಗಡ: ರೋಣ ವಿಧಾನಸಭಾ ಕ್ಷೇತ್ರಕ್ಕೆ ಕೆಜೆಪಿ ಅಭ್ಯರ್ಥಿಯಾಗಿ ಶರಣಬಸವ ಮೆಣಸಿನಕಾಯಿ ಹೆಸರನ್ನು ಪಕ್ಷವು ಶನಿವಾರ ಪ್ರಕಟಗೊಳಿಸುತ್ತಿದ್ದಂತೆ ಸ್ಥಳೀಯ ಪಕ್ಷದ ಕಾರ್ಯಾಲಯದಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕೆಜೆಪಿ ಅಭ್ಯರ್ಥಿ ಶರಣಬಸವ ಮೆಣಸಿನಕಾಯಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರೀಯ ಪಕ್ಷಗಳಿಂದ ರಾಷ್ಟ್ರದ ಅಭಿವೃದ್ಧಿ ಅಸಾಧ್ಯವೆಂದರಿತ ರಾಜ್ಯದ ಜನತೆ ಈ ಬಾರಿ ಪ್ರಾದೇಶಿಕ ಪಕ್ಷಗಳಿಗೆ ಮನ್ನಣೆ ನೀಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅನೇಕ ಜನಪರ ಯೋಜನೆಗಳು ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಲಿವೆ. ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ದೇಶದಲ್ಲಿಯೇ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿಸುವ ಬಿ.ಎಸ್. ಯಡಿಯೂರಪ್ಪನವರ ಸಂಕಲ್ಪಕ್ಕೆ ರಾಜ್ಯದ ಮತದಾರ ಪ್ರಭುಗಳು ಆಶೀರ್ವದಿಸಲಿದ್ದಾರೆ. ರೋಣ ಮತಕ್ಷೇತ್ರದಲ್ಲಿ ಕೆಜೆಪಿಗೆ ಅಭೂತಪೂರ್ವ ಬೆಂಬಲ ದೊರೆತ ಹಿನ್ನೆಲೆಯಲ್ಲಿ ಕೆಜೆಪಿ ಅಭ್ಯರ್ಥಿ ಗೆಲುವು ಖಚಿತ ಎಂದರು. ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ನೇತೃತ್ವದಲ್ಲಿ ಏ. 15 ರಂದು ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

