ಗದಗ

ಡಾ. ಅಂಬೇಡ್ಕರ್ ಅಪ್ರತಿಮ ನಾಯಕ

Published On :

ಕನ್ನಡಪ್ರಭ ವಾರ್ತೆ, ಗದಗ, ಏ. 14
ಹಲವು ದೇಶಗಳನ್ನು ಸಂಚರಿಸಿ ನಮ್ಮ ಭಾರತೀಯ ಸಂಸ್ಕೃತಿಗೆ ಅನುಗುಣವಾಗುವಂತೆ ಸಂವಿಧಾನವನ್ನು ರಚಿಸಿ, ಸಂವಿಧಾನ ಶಿಲ್ಪಿ ಎಂಬ ಹೆಸರು ಪಡೆದ ದಿಟ್ಟ ನಾಯಕ ಡಾ. ಬಿ.ಆರ್. ಅಂಬೇಡ್ಕರ್‌ರವರ ಸ್ಮರಣೆ ಸ್ತುತ್ಯಾರ್ಹವಾದುದು ಎಂದು ಗಣೇಶಸಿಂಗ್ ಬ್ಯಾಳಿ ಹೇಳಿದರು.
ಅವರು ಭಾನುವಾರ ಬೆಟಗೇರಿಯ ಮಹಾರಾಣಾ ಪ್ರತಾಪಸಿಂಹ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ 2013-14ರ ಶೈಕ್ಷಣಿಕ ಚಟುವಟಿಕೆಗೆ ಚಾಲನೆ ನೀಡಿ ಮಾತನಾಡಿದರು. ನಮ್ಮ ದೇಶ ಕಂಡ ವರ್ಣ ರಂಜಿತ ನಾಯಕನನ್ನು ನಾವೆಲ್ಲರೂ ಸ್ಮರಿಸುತ್ತ ಅವರ ತತ್ವ, ಆದರ್ಶಗಳನ್ನು ಪಾಲಿಸಲು ಪ್ರಯತ್ನಿಸೋಣ ಎಂದರು. ಮಹಾವಿದ್ಯಾಲಯದ ಪ್ರಾಚಾರ್ಯೆ ವೈ.ಆರ್. ಹಿರೇಗೌಡ್ರ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್‌ರವರು ದೇಶಕ್ಕೆ ಸಲ್ಲಿಸಿದ ಸೇವೆ ಅಪಾರ. ಅವರು ದೇಶಕಂಡ ಮಹಾನ್ ವ್ಯಕ್ತಿಯಾಗಿದ್ದು, ಅವರ ಆದರ್ಶಗಳನ್ನು ಇಂದಿವ ಯುವಜನತೆ ಅಳವಡಿಸಿಕೊಳ್ಳುವ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಬೇಕಾಗಿದೆ ಎಂದರು. ವಿದ್ಯಾ ಗೋಟೂರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಮುಖ್ಯೋಪಾಧ್ಯಾಯ ಎಸ್.ಎಂ. ಹೂಗಾರ ಸ್ವಾಗತಿಸಿದರು. ಶಿಕ್ಷಕ ವಿ.ಜಿ. ಕಾಂಬಳೇಕರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.