ಪ್ರಾದೇಶಿಕ ಪಕ್ಷಗಳು ಬಹಳ ದಿನ ಉಳಿಯಲ್ಲ: ಕಳಕಪ್ಪ
ಕನ್ನಡಪ್ರಭ ವಾರ್ತೆ, ಮುಂಡರಗಿ, ಏ.14
ನಾಯಿ ಕೊಡೆಗಳಂತೆ ಹುಟ್ಟಿಕೊಳ್ಳುತ್ತಿರುವ ಪ್ರಾದೇಶಿಕ ಪಕ್ಷಗಳ ಬಗ್ಗೆ ಮತದಾರರು ತಲೆಕೆಡಿಸಿಕೊಳ್ಳಬೇಕಿಲ್ಲ. ಇವು ಬಹಳ ದಿನ ಉಳಿಯುವದಿಲ್ಲ, ನಾಯಿ ಕೊಡೆಯಂತೆ ಹುಟ್ಟಿ 3-4 ದಿನದಲ್ಲಿ ಯಾರೂ ಬಳಸಿಕೊಳ್ಳದಿದ್ದರೆ ಸತ್ತು ಹೋಗುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು
ಅವರು ಶುಕ್ರವಾರ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡು ಮಾತನಾಡಿದರು.
ಬಿಜೆಪಿ ಸರ್ಕಾರ 5 ವರ್ಷದಲ್ಲಿ ಪ್ರತಿ ವರ್ಷ ನೀರಾವರಿ ಯೋಜನೆಗಳಿಗಾಗಿ 10 ಸಾವಿರ ಕೋಟಿ ರು. ಖರ್ಚು ಮಾಡಿದೆ. 50 ವರ್ಷಗಳಿಂದ ಆಗದಿರುವ ಅಭಿವೃದ್ಧಿ ಕೆಲಸಗಳನ್ನು ಕೇವಲ 4 ವರ್ಷ 10 ತಿಂಗಳಲ್ಲಿ ಬಿಜೆಪಿ ಸರ್ಕಾರ ಮಾಡಿ ತೋರಿಸಿದೆ ಎಂದರು. ಬಿಜೆಪಿಯ ಜಿಲ್ಲಾಧ್ಯಕ್ಷ ಎಂ.ಎಸ್. ಕರಿಗೌಡ್ರ ಮಾತನಾಡಿ, ಈ ಹಿಂದೆ ಯಾವುದೇ ಸರ್ಕಾರಗಳು ಮಾಡದಿರುವ 43 ಹೊಸ ತಾಲೂಕುಗಳನ್ನು ಮಾಡಿದ ಕೀರ್ತಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಸಲ್ಲುತ್ತದೆ ಎಂದರು.
ಅಂದಪ್ಪ ಹಾರೋಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಣ ಬಿಜೆಪಿ ಉಪಾಧ್ಯಕ್ಷ ಗಿಡ್ಡಪ್ಪ ಹಾರೋಗೇರಿ, ಡಂಬಳ ಜಿಪಂ ಸದಸ್ಯ ಬೀರಪ್ಪ ಬಂಡಿ, ಮುದ್ಲಿಂಗಪ್ಪ ಕೊರ್ಲಹಳ್ಳಿ, ವಿ.ಎಸ್. ಯರಾಶಿ, ಸಿದ್ದಪ್ಪ ಬರದೂರ, ವೀರಪ್ಪ ಕೋವಿ, ಸೋಮಣ್ಣ ಚನ್ನಳ್ಳಿ, ನಾಗಪ್ಪ ಚುಂಗಿನ, ಎಸ್.ವಿ. ಪಾಟೀಲ, ಬಿ.ಎ. ಹಳ್ಳಿಕೇರಿ ಮುಂತಾದವರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದ 100ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

