ಜಿ.ಎಸ್. ಪಾಟೀಲ್ ಅಖಾಡಕ್ಕೆ
ರೋಣ: ರೋಣ ವಿಧಾನಸಭೆ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಶಾಸಕ ಜಿ.ಎಸ್. ಪಾಟೀಲ ತಮ್ಮ ಅಪಾರ ಸಂಖ್ಯೆಯ ಅಭಿಮಾನಿ, ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಸೋಮವಾರ ತಹಸೀಲ್ದಾರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಪಟ್ಟಣದ ರಾಜೀವಗಾಂಧಿ ಕಾಲೇಜ್‌ದಿಂದ ಆರಂಭಗೊಂಡ ಭವ್ಯ ಮೆರವಣಿಗೆಯಲ್ಲಿ ಸಹಸ್ರಾರು ಜನರು ಪಾಲ್ಗೊಂಡಿದ್ದರು. ಲಂಬಾಣಿ ನೃತ್ಯ, ಜಾಂಜ್ ಮೇಳ, ಡೊಳ್ಳು ಕುಣಿತ, ಮಹಿಳೆಯರ ಜಾನಪದ ನೃತ್ಯ ಸೇರಿದಂತೆ ಯುವಕರ ತಾಳದ ಕುಣಿತ ಮೆರವಣಿಗೆಯ ಆಕರ್ಷಕ ಕೇಂದ್ರ ಬಿಂದುಗಳಾಗಿದ್ದವು. ಈ ಸಂದರ್ಭದಲ್ಲಿ ಮಾಜಿ ಸಂಸದ ಆರ್.ಎಸ್. ಪಾಟೀಲ, ವಿಶ್ವನಾಥ ಜಿಡ್ಡಿಬಾಗಿಲ, ವಿ.ಆರ್. ಗುಡಿಸಾಗರ, ರವಿ ದಂಡಿನ, ನಿಂಗಪ್ಪ ಬೇವಿನಮರದ, ನಿಂಗಪ್ಪ ಕೆಂಗಾರ, ವೀರಣ್ಣ ಶೆಟ್ಟರ, ಪ್ರಭು ಮೇಟಿ, ಚಂಭಣ್ಣಾ ಚವಡಿ, ಮೋಹನ ರಾಯಬಾಗಿ, ಸುಬಾನಸಾಬ ಅರಗಿದ್ದಿ, ವೀರಣ್ಣಾ ಸೊನ್ನದ, ಪರಶುರಾಮ ಅಳಗವಾಡಿ, ಸಂಗು ನವಲಗುಂದ, ಶಿವು ಹುಲ್ಲೂರ, ಸುರೇಶ ಜಗ್ಗಲ, ಕೆ.ಕೆ.ಮುಲ್ಲಾ, ಶರಣಪ್ಪ ಸಜ್ಜನ, ಪ್ರಕಾಶ ಹಾಲಣ್ಣವರ, ಶಫಿಕ ಮೂಗನೂರ, ಮಂಜುನಾಥ ಹಾಳಕೇರಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

