ಸಿ.ಸಿ. ಪಾಟೀಲರ ನಾಮಪತ್ರ ಸಲ್ಲಿಕೆ
ನರಗುಂದ: ಗುಂಡೇಟಿನಿಂದ ಗಾಯಗೊಂಡು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಸಿ.ಸಿ. ಪಾಟೀಲರ ನಾಮಪತ್ರವನ್ನು ಸೋಮವಾರ ಸೂಚಕರು ಹಾಗೂ ಅವರ ಪತ್ನಿ ಶೋಭಾ ಪಾಟೀಲ, ಬಾಗಲಕೋಟ ಸಂಸದ ಪಿ.ಸಿ. ಗದ್ದಿಗೌಡ್ರ ಸಲ್ಲಿಸಿದರು.
ಸಿ.ಸಿ. ಪಾಟೀಲ ನಾಮಪತ್ರವನ್ನು ಅವರ ಸೂಚಕರ ಮೂಲಕ ಸಲ್ಲಿಸಿದ್ದು, ಸದ್ಯದಲ್ಲಿಯೇ ಅವರು ಕ್ಷೇತ್ರಕ್ಕೆ ಮರಳಲಿದ್ದಾರೆಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸೋಮವಾರ ಪಟ್ಟಣದ ವೀರ ಬಾಬಾಸಾಹೇಬರ ಮೂರ್ತಿಗೆ ಮಾಲಾರ್ಪಣೆ ಮಾಡಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಬಿಎಸ್ಆರ್ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ನಾಮಪತ್ರ ಸಲ್ಲಿಸಲು ಮಿನಿ ವಿಧಾನಸೌಧಕ್ಕೆ ತೆರಳಿದ ಸಂದರ್ಭದಲ್ಲಿ ಕೆಲವು ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಜರುಗಿದೆ. ಲೋಕಸಭಾ ಸದಸ್ಯ ಪಿ.ಸಿ. ಗದ್ದಿಗೌಡರ ಮತ್ತು ಶಾಸಕ ಸಿ.ಸಿ. ಪಾಟೀಲ್ ಪತ್ನಿ ಶೋಭಾ ಪಾಟೀಲ್ ಮಿನಿ ವಿಧಾನಸೌಧಕ್ಕೆ ಹೋದಾಗ ಪೊಲೀಸರು ನಾಮಪತ್ರ ಸಲ್ಲಿಸಲು ಹೋಗಬೇಕಾದಲ್ಲಿ ವಾಹನ ಒಳಗಡೆ ಬಿಡುವುದಿಲ್ಲ. ಕೇವಲ ಅಭ್ಯರ್ಥಿ ಸೇರಿ 5 ಜನಕ್ಕೆ ಮಾತ್ರ ಅವಕಾಶವಿದೆ ಎಂದು ಬಿಜೆಪಿ ಅಭ್ಯರ್ಥಿಗಳ ಬೆಂಬಲಿಗರನ್ನು ಪೊಲೀಸರು ತಡೆದಾಗ, ಅದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡು ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್. ಯಾವಗಲ್ 2 ವಾಹನ ತೆಗೆದುಕೊಂಡು ಹೋದ ಸಂದರ್ಭದಲ್ಲಿ ಪೊಲೀಸರು ಸುಮ್ಮನೇ ಇದ್ದು, ಈಗ ಬಿಜೆಪಿ ಅಭ್ಯರ್ಥಿ ಪರವಾಗಿ ಶೋಭಾ ಪಾಟೀಲರ ವಾಹನ ಒಳಗಡೆ ಹೋಗಲು ಪರವಾನಿಗೆ ನೀಡದಿರುವುದಕ್ಕೆ ಪೊಲೀಸರ ಜತೆ ವಾಗ್ವಾದಕ್ಕೆ ಇಳಿದರು. ಇದರಿಂದಾಗಿ ಕೆಲ ಸಮಯ ಗೊಂದಲದ ವಾತಾವರಣ ಉಂಟಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

