ಇಂದಿನಿಂದ ಮತದಾರರ ಜಾಗೃತಿ
ಕನ್ನಡಪ್ರಭ ವಾರ್ತೆ, ಗದಗ, ಏ. 16
ಮತದಾನ ಪ್ರಕ್ರಿಯೆಯಲ್ಲಿ ಮತದಾರರೆಲ್ಲರೂ ಸಕ್ರೀಯವಾಗಿ ಪಾಲ್ಗೊಳ್ಳಲು ಜನರಲ್ಲಿ ಮತದಾನ ಮಹತ್ವದ ಕುರಿತು ಜಾಗೃತಿ ಮೂಡಿಸಲು ಏ. 17ರಿಂದ ಜಿಲ್ಲೆಯ ಎಲ್ಲ ಗ್ರಾಪಂ ಕೇಂದ್ರಗಳಲ್ಲಿ ಮತದಾರರ ಜಾಗೃತಿ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಭಾಗವಹಿಸುವಿಕೆ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಜಿಪಂ ಸಿಇಓ ವೀರಣ್ಣ ತುರಮರಿ ಹೇಳಿದರು.
ಅವರು ಮಂಗಳವಾರ ಗದಗ ತಾಪಂ ಸಭಾಂಗಣದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗಾಗಿ ಏರ್ಪಡಿಸಲಾಗಿದ್ದ ಗ್ರಾಮೀಣ ಪ್ರದೇಶದ ಮತದಾರರ ಜಾಗೃತಿ ರ್ಯಾಲಿ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏ. 17 ರಿಂದ ಜಿಲ್ಲೆಯ ಎಲ್ಲ ಗ್ರಾಪಂ ಕೇಂದ್ರಗಳಲ್ಲಿ ಸಿಇಓರವರ ಮಾರ್ಗದರ್ಶನದಲ್ಲಿ ಆಯಾ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಮತದಾರರ ಜಾಗೃತಿ ರ್ಯಾಲಿ ನಡೆಯಲಿದೆ. ಏ. 18, 19ರಂದು ಪಂಚಾಯಿತಿಗೆ ಹೊಂದಿಕೊಂಡಂತಿರುವ ಉಳಿದ ಎಲ್ಲ ಗ್ರಾಮಗಳಲ್ಲಿಯೂ ಜಾಗೃತಿ ರ್ಯಾಲಿ ನಡೆಯಲಿದೆ. ಈ ರ್ಯಾಲಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು. ಸ್ವ-ಸಹಾಯ ಸಂಘಗಳ ಮಹಿಳೆಯರು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮತದಾರರ ಜಾಗೃತಿಗಾಗಿ ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ 2 ಹಂತದಲ್ಲಿ ಬೀದಿನಾಟಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಅಲ್ಲದೆ ಕರಪತ್ರ, ಬಿತ್ತಿ ಪತ್ರ ಹಾಗೂ ತಮಟೆ ಮೂಲಕ ಮತದಾರರಿಗೆ ಮಾಹಿತಿ ನೀಡುವಂತೆ ತಿಳಿಸಿದ ಅವರು, ಪಿಡಿಓಗಳಿಗೆ ಕಾರ್ಯಕ್ರಮಕ್ಕೆ ಪೂರಕವಾದ ಹಾಗೂ ಮತದಾನದ ಮಹತ್ವ ಸಾರುವ ಪ್ರಚಾರ ಸಾಮಗ್ರಿಗಳನ್ನು ವಿತರಿಸಿದರು. ಸಭೆಯಲ್ಲಿ ಜಿಲ್ಲಾ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಭಾಗವಹಿಸುವಿಕೆ ಕಾರ್ಯಕ್ರಮ ಅನುಷ್ಠಾನ ಸಮಿತಿ ಸದಸ್ಯ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜೀವ ನಾಯಕ, ನಗರಸಭಾ ಪೌರಾಯುಕ್ತ ಎಂ.ಬಿ. ನಡುವಿನಮನಿ ಸೇರಿದಂತೆ ಜಿಲ್ಲೆಯ ಎಲ್ಲ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

