ಕಾಂಗ್ರೆಸ್ನಿಂದ ಮಾತ್ರ ಸ್ಥಿರ ಸರ್ಕಾರ: ಗಡ್ಡದೇವರಮಠ
ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಏ. 16
ಕಾಂಗ್ರೆಸ್ ಪಕ್ಷವು ಹಿಂದುಳಿದ, ಅಲ್ಪಸಂಖ್ಯಾತರ, ಬಡವರ ಏಳ್ಗೆಗಾಗಿ ಶ್ರಮಿಸುವ ಪಕ್ಷವಾಗಿದೆ. ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿ ತನ್ನ ರೈತಪರ ಕಾಳಜಿ ತೋರಿದೆ. ಈ ಬಾರಿ ಜನತೆ ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆಗೆ ಕಾಂಗ್ರೆಸ್ಗೆ ಬಹುಮತ ನೀಡುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ತಕ್ಕಪಾಠ ಕಲಿಸುವಂತೆ ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಹೇಳಿದರು.
ಈಚೆಗೆ ಅವರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಪರ ಮತಯಾಚನೆ ಮಾಡಿ ಮಾತನಾಡಿದರು. ಶಿರಹಟ್ಟಿ ಮತ್ತು ಮುಂಡರಗಿ ರಾಜ್ಯದಲ್ಲಿಯೇ ಹಿಂದುಳಿದ ತಾಲೂಕುಗಳಾಗಿದ್ದು, ಇವುಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಕಲ್ಪಿಸಿಕೊಡುವಂತೆ ಹೇಳಿದರು. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಅಲೆಯಿದ್ದು, ಸ್ಪಷ್ಟ ಬಹುಮತ ಬರುವುದು ನಿಶ್ಚಿತ ಎಂದರು.
ಪಕ್ಷದ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಹಲವಾರು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ನಾಯಕರಾಗಲಿ, ಜನತೆಯ ಬೆಂಬಲ ಪಡೆದ ಮುಖಂಡರಾಗಲಿ ತಾಲೂಕಿನಲ್ಲಿ ಯಾವುದೇ ಪ್ರಗತಿ ಮಾಡದೇ, ಜನತೆಗೆ ಮೋಸಮಾಡಿದ್ದಾರೆ. ಹಿಂದುಳಿದ ಜನತೆಯನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಜನಾಂಗದ ಹೆಸರಿನ ಮೇಲೆ ರಾಜಕಾರಣ ಮಾಡುವವರನ್ನು ಬೆಂಬಲಿಸದೆ ಸರ್ವ ಜನಾಂಗದ ಶ್ರೇಯಸ್ಸು ಬಯಸುವ ನಾಯಕರನ್ನು ಬೆಂಬಲಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು. ಟಿ. ಈಶ್ವರ, ಯು.ಎನ್. ಹೊಳಲಾಪುರ, ಲಕ್ಷ್ಮಣಗೌಡ ಪಾಟೀಲ, ಬಿ.ಎನ್. ಬೆಟಗೇರಿ, ದೇವಪ್ಪ ಲಮಾಣಿ, ಶಿವನಗೌಡ ಪಾಟೀಲ, ಮಹೇಶ ಕಲ್ಲಪ್ಪನವರ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

