ಯುವ ಜನಾಂಗ ಕ್ರಿಯಾಶೀಲವಾಗಲಿ: ಭೂತನಾಳ
ಕನ್ನಡಪ್ರಭ ವಾರ್ತೆ, ಗದಗ, ಏ. 17
ಯುವ ಜನಾಂಗ ಹಾದಿ ತಪ್ಪುವತ್ತ ಹೆಜ್ಜೆ ಹಾಕುತ್ತಿದೆ. ದುರ್ವ್ಯಸನಗಳಿಂದ ದೂರಾಗಿ ಕ್ರಿಯಾಶೀಲತೆ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ ಹೇಮಂತ ಭೂತನಾಳ ಅಭಿಪ್ರಾಯಪಟ್ಟರು.
ತಾಲೂಕಿನ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಎಚ್ಚರಿಕೆಯಿಂದ ನಡೆಯಬೇಕು. ಹಿರಿಯರ ಮಾರ್ಗದರ್ಶನ, ವಿದ್ಯಾ ಸಂಸ್ಥೆಗಳಲ್ಲಿ ಬೋಧಕರ ಪ್ರವಚನಗಳಿಗೆ ಕಿವಿಗೊಟ್ಟು ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಅತಿಥಿಗಳಾಗಿದ್ದ ಮುಂಡರಗಿಯ ಜ. ತೋಂಟದಾರ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ ಎಸ್.ಜಿ. ಕಡ್ಡಿ ಮಾತನಾಡಿ, ಪರೀಕ್ಷೆಗಳು ಕೆಲವೇ ದಿನಗಳಲ್ಲಿ ನಡೆಯಲಿವೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಅಧ್ಯಯನ ಮಾಡಿ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ ಶಿವಪ್ಪ ಕುರಿ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಅನೇಕ ಅವಕಾಶಗಳಿವೆ. ವಿದ್ಯಾರ್ಥಿ ಜೀವನದಲ್ಲಿ ಗಳಿಸಿದ ಕೌಶಲ್ಯಗಳನ್ನು ರೂಢಿಸಿಕೊಂಡು ಸ್ಪರ್ಧೆಗಳಲ್ಲಿ ಯಶಸ್ಸು ಪಡೆಯಬೇಕು ಎಂದರು.
ಪ್ರೊ ವಿ.ಬಿ. ತಂಗೋಡ, ಚಂದ್ರಪ್ಪ ಎಚ್.ಎಸ್., ನಾಗರಾಜ ಹಾವಿನಾಳ ಮಾತನಾಡಿದರು. ವಿದ್ಯಾರ್ಥಿಗಳಾದ ಪ್ರಭು ರೋಣದ, ಸವಿತಾ ತಟ್ಟೀಮನಿ, ಅನಿತಾ ದಾಮೋದರ, ಸುನಿತಾ ಉಮಚಗಿ, ಶೋಭಾ ಕವಡಕಿ, ಭಕ್ತಿ ಓದುಗೌಡ್ರ, ಮಹೇಶ ಹೊಂಗಲ, ಪ್ರಶಾಂತ ಪೂಜಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕವಿತಾ ಬೆಣಚಿಕರ ಪ್ರಾರ್ಥಿಸಿದರು.
ಎಫ್.ಬಿ. ಆನಿ ಸ್ವಾಗತಿಸಿದರು. ಸವಿತಾ ಪಾಟೀಲ ನಿರೂಪಿಸಿದರು. ಎಂ.ಎನ್. ಬದ್ನಿಕಾಯಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

