ಗದಗ

ಇಂದು ಬಿಜೆಪಿ ಕಾರ್ಯಾಲಯ ಉದ್ಘಾಟನೆ

Published On :

ಮುಂಡರಗಿ: ಪಟ್ಟಣದ ಸಂತೋಷ ಚಿತ್ರಮಂದಿರದ ಹತ್ತಿರ ಏ. 19ರ ಸಂಜೆ 4 ಗಂಟೆಗೆ ಬಿಜೆಪಿ ಕಾರ್ಯಾಲಯ ಉದ್ಘಾಟನೆಯಾಗಲಿದೆ. ಉದ್ಘಾಟನೆಯನ್ನು ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮಣ್ಣ ಲಮಾಣಿ ನೆರವೇರಿಸುವರು.
ಅಧ್ಯಕ್ಷತೆಯನ್ನು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ವಹಿಸುವರು. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮುಂಡರಗಿ ಹೋಬಳಿಯ ಎಲ್ಲ ಪುರಸಭೆ, ಗ್ರಾಪಂ, ತಾಪಂ ಹಾಗೂ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಮಂಜುನಾಥ ಕಾಗನೂರಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಗೂಸಾ ದೊಡ್ಡುಸಾ ರಾಯಬಾಗಿ ನಿಧನ
ಗಜೇಂದ್ರಗಡ: ಸ್ಥಳೀಯ ಹಿರಿಯ ವರ್ತಕ ನಾಗೂಸಾ ದೊಡ್ಡುಸಾ ರಾಯಬಾಗಿ (80) ಗುರುವಾರ ನಿಧನರಾದರು. ಮೃತರು ಪತ್ನಿ, ಐವರು ಪುತ್ರರಲ್ಲಿ ಪುರಸಭೆ ಮಾಜಿ ಉಪಾಧ್ಯಕ್ಷ ಭಾಸ್ಕರ್ ರಾಯಬಾಗಿ ಓರ್ವರಾಗಿದ್ದಾರೆ. ಓರ್ವ ಪುತ್ರಿ ಹಾಗೂ ಅಪಾರ  ಬಂಧುಬಳಗ ಹೊಂದಿದ್ದಾರೆ. ಇವರ ನಿಧನಕ್ಕೆ ಸಚಿವ ಕಳಕಪ್ಪ ಬಂಡಿ, ಮಾಜಿ ಶಾಸಕ ಜಿ.ಎಸ್. ಪಾಟೀಲ, ಆರ್.ಎಸ್. ಪಾಟೀಲ ಸಂತಾಪ ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.