ತರಬೇತಿಗೆ ಅರ್ಜಿ ಆಹ್ವಾನ
ಗದಗ: 2012-13ನೇ ಸಾಲಿಗೆ ಗದಗ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಡಿ.ಟಿ. ಮಹಿಳಾ ಹೊಲಿಗೆ ತರಬೇತಿ ಕೇಂದ್ರಕ್ಕೆ ಅಭ್ಯರ್ಥಿಗಳನ್ನು ತುಂಬಿಕೊಳ್ಳುವುದಕ್ಕಾಗಿ ಪ್ರವೇಶ ಕೋರಿ ಗ್ರಾಮೀಣ ಪ್ರದೇಶಗಳ ಮಹಿಳಾ ಅಭ್ಯರ್ಥ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಬುಡಬುಡಕಿ, ಗೊಂದಳಿ, ಡೊಂಬರಿ, ಗಾರುಡಿ, ಹೆಳವ, ಜೋಗಿ, ವಾಸುದೇವ, ವಾಡಿ, ಉಪ್ಪಾರ, ಪಿಂಜಾರ್, ನದಾಫ್, ಚಿಕ್ಕಲಗೇರ, ಗೊಲ್ಲ, ಕಿಳ್ಳೀಕ್ಯಾತರ, ದುರ್ಗಮುರ್ಗಿ, ಹಾವಾಡಿಗರ, ಬೇಸ್ತ, ದರವೇಶಿ ಮತ್ತು ಬೈಲಪತ್ತಾರ ಜಾತಿಗಳಿಗೆ ಶೇ. 75 ರಷ್ಟು ಪ್ರವೇಶಕ್ಕೆ ಅವಕಾಶ ಇರುವುದು. ಆಯ್ಕೆಯಾಗುವ ಮಹಿಳಾ ಅಭ್ಯರ್ಥಿಗಳಿಗೆ ಒಂದು ವರ್ಷ ತರಬೇತಿ ನೀಡಲಾಗುವುದು. ತರಬೇತುದಾರರಿಗೆ ಮಾಸಿಕ ರು. 300 ಸ್ಟೈಫಂಡ್ ನೀಡಲಾಗುವುದು. ಈ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿ ಒಟ್ಟು 20 ಅಭ್ಯರ್ಥಿಗಳಿಗೆ ಮಾತ್ರ ನಿಯಮಾನುಸಾರ ಪ್ರವೇಶಕ್ಕೆ ಅವಕಾಶ ಇರುವುದು. ತರಬೇತಿ ಮುಗಿದ ನಂತರ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಒಂದು ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲಾಗುವುದು. ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಏ. 30 ರೊಳಗೆ ಸಲ್ಲಿಸಬೇಕು. ಅರ್ಜಿ ಫಾರಂ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಗದಗ ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

