ಚುನಾವಣಾ ಕಾರ್ಯಕ್ಕೆ ಭಾಷಾಂತರಕಾರರ ನೇಮಕ
ಗದಗ: ಮೇ 5ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಭಾಷೆಯ ದೈನಿಕಗಳಲ್ಲಿ ನಿತ್ಯ ಪ್ರಕಟಗೊಳ್ಳುವ ಸುದ್ದಿಭಾಗಗಳನ್ನು ಭಾಷಾಂತರಿಸಲು ಹಾಗೂ ಚುನಾವಣಾ ವೀಕ್ಷಕರಿಗೆ ಸಾರ್ವಜನಿಕರ ಅಹವಾಲುಗಳ ಮಾಹಿತಿಯನ್ನು ಆಂಗ್ಲಭಾಷೆಯಲ್ಲಿ ಭಾಷಾಂತರಿಸಿ ಮಾಹಿತಿ ನೀಡುವ ಸಲುವಾಗಿ, ಚುನಾವಣಾ ಅವಧಿ ಮುಕ್ತಾಯಗೊಳ್ಳುವವರೆಗೆ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿಗೆ ಅರ್ಹ ಭಾಷಾಂತರಕಾರರನ್ನು ನಿಯೋಜಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಾಂಡುರಂಗ ನಾಯಕ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಗದಗ ಜಿಲ್ಲಾಧಿಕಾರಿಗಳ ಕಚೇರಿಗೆ ಕೆವಿಎಸ್ಆರ್ ಪಪೂ ಮಹಾವಿದ್ಯಾಲಯದ ಆಂಗ್ಲ ಉಪನ್ಯಾಸಕ ಅನಿಲ ವೈದ್ಯ-9480239241, ಶಿರಹಟ್ಟಿ ವಿಧಾನಸಭಾ ಕ್ಷೇತ್ರಕ್ಕೆ ಶಿರಹಟ್ಟಿಯ ಎಫ್.ಎಂ. ಡಬಾಲಿ ಪಪೂ ಕಾಲೇಜಿನ ಉಪನ್ಯಾಸಕ ಎಂ.ಜಿ. ಭಜಂತ್ರಿ-9972296386, ಗದಗ ವಿಧಾನಸಭಾ ಕ್ಷೇತ್ರಕ್ಕೆ ವಿದ್ಯಾದಾನ ಬಾಲಕರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ದತ್ತುಪ್ರಸನ್ ಪಾಟೀಲ-9448640833, ರೋಣ ವಿಧಾನಸಭಾ ಕ್ಷೇತ್ರಕ್ಕೆ ರೋಣದ ಸರ್ಕಾರಿ ಪಪೂ ಮಹಾವಿದ್ಯಾಲಯದ ಉಪನ್ಯಾಸಕ ಹಜಾರೆ-9480577075 ಹಾಗೂ ನರಗುಂದ ವಿಧಾನಸಭಾ ಕ್ಷೇತ್ರಕ್ಕೆ ಕೊಣ್ಣೂರು ಸರ್ಕಾರಿ ಪಪೂ ಮಹಾವಿದ್ಯಾಲಯದ ಉಪನ್ಯಾಸಕ ಎಂ.ವೈ. ಮಾಲಗಾರ-9886949448 ಅವರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--
ಜಯಶ್ರೀ ಹಳ್ಳೆಪ್ಪನವರ ಉಮೇದುವಾರಿಕೆ
ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಏ. 18
ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ಜಯಶ್ರೀ ಹಳ್ಳೆಪ್ಪನವರ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಲು ತೆರಳಿದರು.
ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ ಅವರ ತೋಟದಿಂದ ಹೊರಟ ಮೆರವಣಿಗೆಯು ಜಾಂಜ್ ಮೇಳದೊಂದಿಗೆ ಪಟ್ಟಣದ ಪಂಪವೃತ್ತ, ವಿದ್ಯಾರಣ್ಯ ವೃತ್ತ,ಪೇಟೆಯ ಹಾವಳಿ ಹನುಮಪ್ಪನ ದೇವಸ್ಥಾನದಿಂದ ಬಜಾರ್ ರಸ್ತೆಯ ಮೂಲಕ ಪುರಸಭೆ ಹಾಗೂ ಹೊಸ ಬಸ್ ನಿಲ್ದಾಣದ ಹತ್ತಿರ ಹಾದು ಗದಗ ನಾಕಾದಿಂದ ಸಾಗಿ ಶಿರಹಟ್ಟಿಗೆ ತೆರಳಿತು. ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್, ಬಿಎಸ್ಆರ್ ಹಿರಿಯ ಮುಖಂಡ ಸಣ್ಣೀರಪ್ಪ ಹಳ್ಳೆಪ್ಪನವರ, ಮಹಾಂತೇಶ ಹಳ್ಳೆಪ್ಪನವರ, ಸೋಮಣ್ಣ ಡಾಣಗಲ್ಲ, ತಾಪಂ ಮಾಜಿ ಅಧ್ಯಕ್ಷ ಅಶೋಕ ಪಲ್ಲೇದ, ಮದನಲಾಲ್ ಬಾಫಣಾ, ಶಿವಾನಂದ ದೇಸಾಯಿ, ಮೋಹನ ನರಗುಂದ, ಶಿವರಾಜಗೌಡ ಪಾಟೀಲ ನೂರಾರು ಬೆಂಬಲಿಗರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

