ನಾಳೆ ಬೆಳ್ಳಟ್ಟಿಗೆ ಸಿದ್ದರಾಮಯ್ಯ
ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಏ. 18
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ, ಸತೀಶ ಜಾರಕಿಹೊಳಿ, ವೀರಣ್ಣ ಮತ್ತಿಕಟ್ಟಿಯವರು ಏ. 20ರಂದು ಮಧ್ಯಾಹ್ನ 2 ಗಂಟೆಗೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಟಿ.ಈಶ್ವರ ಹೇಳಿದರು.
ಅವರು ಗುರುವಾರ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏ. 20ರಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಗದಗ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಧ್ಯಾಹ್ನ 2 ಗಂಟೆಗೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿಯಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಂದು ನಡೆಯುವ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಸತೀಶ ಜಾರಕಿಹೊಳಿ, ವೀರಣ್ಣ ಮತ್ತಿಕಟ್ಟಿ ಹಾಗೂ ಎಚ್.ಕೆ. ಪಾಟೀಲ ಸೇರಿದಂತೆ ಇನ್ನೂ ಹಲವು ಕಾಂಗ್ರೆಸ್ ಮುಖಂಡರು ಆಗಮಿಸುವರು. ಸಭೆಯ ಅಧ್ಯಕ್ಷತೆಯನ್ನು ಜಿ.ಎಸ್. ಗಡ್ಡದೇವರಮಠ ವಹಿಸಿಕೊಳ್ಳಲಿದ್ದಾರೆ.
ಅಂದು ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಪಂಗಡದ ರಾಜ್ಯಾಧ್ಯಕ್ಷ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಬಿ. ಶಿವಪ್ಪ, ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಖಾಲಿದ್ ಅಹ್ಮದ್, ರೈತ ಘಟಕದ ಅಧ್ಯಕ್ಷ ಕರಿಬಸಪ್ಪ, ಹಾವೇರಿ ಜಿಲ್ಲಾ ಬಿಎಸ್ಆರ್ ಅಧ್ಯಕ್ಷ ಜಾಲವಾಡಗಿ ಸೇರಿದಂತೆ ಬಳ್ಳಾರಿ ಜಿಲ್ಲೆ ಹಾಗೂ ರಾಜ್ಯ ವಿವಿಧ ಜಿಲ್ಲೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅನೇಕ ಕಾರ್ಯಕರ್ತರು ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಗಡ್ಡದೇವರಮಠ, ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ, ತಾಪಂ ಸದಸ್ಯ ಚೆನ್ನಪ್ಪ ಜಗಲಿ, ಪುರಸಭೆಯ ಮಾಜಿ ಅಧ್ಯಕ್ಷ ಶಂಕ್ರಣ್ಣ ಮ್ಯಾಗೇರಿ, ಅಡಿವೆಪ್ಪ ಬೆಟಗೇರಿ, ನೀಲಪ್ಪ ಸೆರಸೂರಿ, ಶರಣಪ್ಪ ಕುಬಸದ, ಎ.ಪಿ. ದಂಡಿನ, ವಿಜಯಕುಮಾರ ಶಿಳ್ಳಿನ, ಪಿ.ಬಿ. ಕೆರಿ, ಅಮರೇಶ ತೆಂಬದಮನಿ, ಬಸಣ್ಣ ಮಜ್ಜಿಗುಡ್ಡ, ಸೋಮಣ್ಣ ಭಂಗಿ, ಮಹ್ಮದಗೌಸ್ ಇರಕಲ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

