ಗದಗ

ಚುನಾವಣೆ: ಎಡಗೈ ಉಂಗುರ ಬೆರಳಿಗೆ ಶಾಯಿ

Published On :

ಗದಗ: ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಈ ಬಾರಿ ಎಡಗೈನ ತೋರುಬೆರಳು ಬದಲಿಗೆ, ಉಂಗುರ ಬೆರಳಿಗೆ ಶಾಯಿ(ಮಸಿ) ಹಾಕಲು ನಿರ್ಧರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.  ರಾಜ್ಯದಲ್ಲಿನ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾ. 7ರಂದು ನಡೆದ ಚುನಾವಣೆಯಲ್ಲಿ ಮತದಾನ ಮಾಡಿದವರಿಗೆ ಎಡಗೈನ ತೋರುಬೆರಳಿಗೆ ಶಾಯಿ ಹಾಕಲಾಗಿತ್ತು. ಅದು ಇನ್ನೂ ಮಾಸದ ಕಾರಣ, ಈ ಬಾರಿ ಉಂಗುರ ಬೆರಳಿಗೆ ಶಾಯಿ ಹಾಕಲು ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
ಗದಗ: ರು. 1.41 ಲಕ್ಷ ಮೌಲ್ಯದ ಮದ್ಯವಶ
ಗದಗ: ರಾಜ್ಯ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಂದಿನವರೆಗೆ ಗದಗ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಆಯ್ದ ಸ್ಥಳಗಳಲ್ಲಿ ರು. 1.41 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ನಡೆದ 220 ದಾಳಿಗಳಲ್ಲಿ 59 ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, 57 ಜನರನ್ನು ಬಂಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮದ್ಯ ಹಾವಳಿ ತಡೆಗೆ ನಿಯಂತ್ರಣ ಘಟಕ ಸ್ಥಾಪನೆ
ಗದಗ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳ್ಳಭಟ್ಟಿ ತಯಾರಿಕೆ, ಸಾಗಾಟ, ಮಾರಾಟ, ಅಕ್ರಮ ಮದ್ಯ ದಾಸ್ತಾನು ಮತ್ತಿತರ ಪ್ರಕರಣಗಳು ನಡೆಯದಂತೆ ಕ್ರಮ ವಹಿಸಲು ಅಬಕಾರಿ ಜಿಲ್ಲಾ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ನಿಯಂತ್ರಣ ಘಟಕಗಳನ್ನು ಸ್ಥಾಪಿಸಲಾಗಿದ್ದು ಉಸ್ತುವಾರಿಗಾಗಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲಾ ಮಟ್ಟದ ನಿಯಂತ್ರಣ ಕೊಠಡಿಯ ನೋಡಲ್ ಅಧಿಕಾರಿ ಸಿ.ಎನ್. ಜನಾಯಿ-9449597095, ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ರೆಡ್ಡಿ-9449597096, ಸೈಯದ್ ಎಂ.ಎಸ್.- 9448556385 ಮತ್ತು ವೈ.ಬಿ. ಗಜಕೋಶ-9449597097 ಅವರನ್ನು ನಿಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.