ಮಾನಗೆಟ್ಟ ರಾಜಕಾರಣಿಗಳನ್ನು ವಿಧಾನಸಭೆಗೆ ಕಳುಹಿಸಬೇಡಿ
ಶಿರಹಟ್ಟಿ: 5 ವರ್ಷಗಳಲ್ಲಿ ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆ, ರೈತರ ಫಲವತ್ತಾದ ಜಮೀನುಗಳನ್ನು ಡಿನೋಟಿಫಿಕೇಶನ್ ಮಾಡುವ ಮೂಲಕ ಹಗಲು ದರೋಡೆ ಮಾಡಿರುವ ಈ ಹಿಂದಿನ ಮಾನಗೆಟ್ಟ ರಾಜಕಾರಣಿಗಳನ್ನು ವಿಧಾನಸಭೆಗೆ ಕಳುಹಿಸಬೇಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದರು.
ಅವರು ಶನಿವಾರ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರಾರ್ಥವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿಯಲ್ಲಿನ ಸಿಎಂ ಹಾಗೂ ಮಂತ್ರಿಗಳು ಜೈಲುವಾಸ ಅನುಭವಿಸಿ ರಾಜ್ಯದ ಮಾನವನ್ನು ಸಂಪೂರ್ಣ ಹರಾಜು ಹಾಕಿದ್ದಾರೆ. ಕೈಗಾರಿಕೆಗಳಿಗೆ ರೈತರ ಫಲವತ್ತಾದ ಜಮೀನು ನೀಡಿದ್ದು, ರಾಜ್ಯದ ಸಂಪತ್ತು ಲೂಟಿ, ಡಿನೋಟಿಫಿಕೇಶನ್ ಮಾಡಿರುವುದೇ ಇವರು ಜೈಲಿಗೆ ಹೋಗಲು ಪ್ರಮುಖ ಕಾರಣ. ಕಾಂಗ್ರೆಸ್ ಹೋರಾಟದ ಫಲವಾಗಿ ರಾಜ್ಯದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಪರವಾನಿಗೆಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತ ಪಡೆಯಲಿದೆ ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಗಡ್ಡದ್ದೇವರಮಠ, ಸತೀಶ ಜಾರಕಿಹೊಳಿ, ಕ್ಷೇತ್ರದ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ, ಟಿ. ಈಶ್ವರ, ಯು.ಎನ್. ಹೊಳಲಾಪುರ, ಎಲ್.ಡಿ. ಪಾಟೀಲ, ವೈ.ಎಸ್. ಪಾಟೀಲ, ಶಿವಪ್ರಕಾಶ ಮಹಾಜನಶೆಟ್ಟರ್, ವಾಸಣ್ಣ ಕುರಡಗಿ, ಜಿ.ಎಸ್. ಪಾಟೀಲ, ಹೇಮಂತಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

