23ರಂದು ಮಹಾವೀರ ಜಯಂತಿ
ಗದಗ: ಜಿಲ್ಲಾ ದಿಗಂಬರ ಜೈನ ಸಂಘವು ಏ. 23ರ ಬೆಳಗ್ಗೆ 8 ಗಂಟೆಗೆ ಸ್ಥಳೀಯ ಮಹಾವೀರ ವೃತ್ತದಲ್ಲಿ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 8 ಗಂಟೆಗೆ ಮಹಾವೀರ ವೃತ್ತದಲ್ಲಿ ಮಹಾವೀರ ಧರ್ಮ ಧ್ವಜಾರೋಹಣ ನೆರವೇರಿಸಿದ ನಂತರ ಭಗವಾನ್ ಮಹಾವೀರ ತೀರ್ಥಂಕರ ಭಾವಚಿತ್ರದ ಭವ್ಯ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಬೆಳಗ್ಗೆ 11ಕ್ಕೆ ಗದುಗಿನ ಹೆರಿಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬ್ರೇಡ್ ವಿತರಿಸಲಾಗುವುದು. ಮಧ್ಯಾಹ್ನ 1.30ಕ್ಕೆ ನಗರದ ವಿದ್ಯಾದಾನ ಸಮಿತಿಯ ಬಾಲಕರ ಪ್ರೌಢ ಶಾಲೆಯ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಅಧ್ಯಕ್ಷ ಬಿ.ಎಸ್. ನಾವಳ್ಳಿ ಅಧ್ಯಕ್ಷತೆ ವಹಿಸುವರು. ವಿದ್ಯಾದಾನ ಸಮಿತಿ ಅಧ್ಯಕ್ಷ ಡಿ.ಬಿ. ಹುಯಿಲಗೋಳ ಉದ್ಘಾಟನೆ ನೆರವೇರಿಸುವರು. ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕ ಡಾ. ಅಪ್ಪಣ್ಣ ಹಂಜೆ ಅವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಅತಿಥಿಗಳಾಗಿ ಗದಗ ಗ್ರಾಮೀಣ ಪಿಎಸ್ಐ ಆನಂದ ವಂಟಕುದರಿ ಆಗಮಿಸುವರು. ಗದಗ-ಬೆಟಗೇರಿ ನಗರಸಭೆಯ ಸದಸ್ಯ ಶ್ರೀನಿವಾಸ ಹುಯಿಲಗೋಳ, ಮುಳಗುಂದ ಪಪಂ ಸದಸ್ಯ ಆರ್.ಎನ್. ದೇಶಪಾಂಡೆ, ಗದಗ ಉಪತಹಸೀಲ್ದಾರ್ ಎಸ್.ವಿ. ಕೋಟಿ, ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಮಾಜಿ ಅಧ್ಯಕ್ಷ ಎನ್.ಡಿ. ಪಾಟೀಲ, ಗ್ರಾಮೀಣ ವಿಕಾಸ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕ ಎ.ಎ. ಉಪಾಧ್ಯೆ, ಪ್ರಾಚ್ಯವಸ್ತು ಇಲಾಖೆಯ ನಿವೃತ್ತ ಅಧಿಕಾರಿ ಅನಂತರಾಜ ಬಸ್ತಿ, ಕೊಣ್ಣೂರಿನ ನಿವೃತ್ತ ವೈದ್ಯಾಧಿಕಾರಿ ಡಾ. ಸುಭಾಸ ವಜ್ರಂಗಿ, ಪಿ.ಎ. ಕುಲಕರ್ಣಿ ಹಾಗೂ ಬಸವರಾಜ ದಂಡಿನ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

