ಗದಗ

ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆ: ಲಮಾಣಿ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಏ. 21
ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ 2ನೇ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲು ಸಂಕಲ್ಪ ಮಾಡಿದ್ದು, ಮತದಾರರ ಆಶೀರ್ವಾದ ಬೇಕಿದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಅವರು ಶುಕ್ರವಾರ ತಾಲೂಕಿನ ವಿರುಪಾಪುರ ತಾಂಡಾದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ನಂತರ ಮಾತನಾಡಿದರು.
ಶಿರಹಟ್ಟಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ ಬಿಜೆಪಿ ಜಾರಿಗೆ ತಂದಿರುವ ಯೋಜನೆಗಳು ತಲುಪಿವೆ. ಜನತೆ ಸಂಪೂರ್ಣ ಯೋಜನೆಗಳ ಲಾಭ ಪಡೆದಿದ್ದು, ಈ ಬಾರಿ ಬಿಜೆಪಿ ಬೆಂಬಲಿಸಲಿದ್ದಾರೆ. 5 ವರ್ಷದ ಆಡಳಿತ ಅವಧಿಯಲ್ಲಿ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದರು.
ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು ಹತಾಶರಾಗಿ ಸುಳ್ಳು ಆರೋಪ, ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ಜನ ನಂಬುವುದಿಲ್ಲ. ಸರ್ಕಾರ ಅನೇಕ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದರು. ಈ ಸಂದರ್ಭದಲ್ಲಿ ಮುದಕಪ್ಪ ಮರಿಗೌಡರ, ಉಮೇಶ ಲಮಾಣಿ, ಡಾಕಪ್ಪ ಮುದ್ಲಾಪುರ, ಕೊಟ್ರೇಶ ದೇವರಮನಿ, ಪರಮೇಶ ಪವಾರ, ಮಾನಪ್ಪ ಲಮಾಣಿ, ದನಶಿಂಗಪ್ಪ ಲಮಾಣಿ, ದನಂಜಯ ಕಾರಬಾರಿ ಕಾರ್ಯಕರ್ತರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.