ಗದಗ

ಇಂದು ನರಗುಂದಕ್ಕೆ ಸಿಎಂ ಜಗದೀಶ ಶೆಟ್ಟರ್

Published On :

ನರಗುಂದ: ಪಟ್ಟಣದ ಗಾಂಧಿ ಚೌಕ್‌ನಲ್ಲಿ ಏ. 22ರ ಮಧ್ಯಾಹ್ನ 2 ಗಂಟೆಗೆ ನರಗುಂದ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಸಿ.ಸಿ.ಪಾಟೀಲ್ ಪರ ಮತಯಾಚನೆ ಹಾಗೂ ಬಹಿರಂಗ ಸಭೆಗೆ ಮುಖ್ಯಮಂತ್ರಿ ಜಗದೀಶ ಶಟ್ಟರ್ ಆಗಮಿಸವರು. ಮತಕ್ಷೇತ್ರದ ಎಲ್ಲ ಜಿಪಂ, ತಾಪಂ, ಗ್ರಾಪಂ, ಎಪಿಎಂಸಿ, ಪುರಸಭೆ, ಸಹಕಾರಿ ಸಂಘದ ಪ್ರತಿನಿಧಿಗಳು ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ಆಗಮಿಸಬೇಕೆಂದು ನರಗುಂದ ವಿಧಾನಸಭಾ ಮತಕ್ಷೇತ್ರದ ಅಧ್ಯಕ್ಷ ಚಂದ್ರು ದಂಡಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನರಗುಂದಕ್ಕೆ ಬಿ. ಶ್ರೀರಾಮುಲು
ನರಗುಂದ: ಪಟ್ಟಣದ ಗಾಂಧಿ ಚೌಕನಲ್ಲಿ ಏ. 22ರ ಬೆಳಗ್ಗೆ 9 ಗಂಟೆಗೆ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಚ್. ಶಿವನಗೌಡರ ಪರ ಮತಯಾಚನೆಗೆ ಹಾಗೂ ಬಹಿರಂಗ ಸಭೆಯಲ್ಲಿ ಭಾಗವಹಿಸಲು ಬಿಎಸ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ. ಶ್ರೀರಾಮುಲು ಆಗಮಿಸುವರು. ಬಹಿರಂಗ ಸಭೆಯ ಮುನ್ನ ಪಟ್ಟಣದ ಕೆಇಬಿ ಬಳಿಯ ಗಣೇಶ ಗುಡಿಯಿಂದ ಭವ್ಯ ಮೆರವಣಿಗೆ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಸಭೆಯಲ್ಲಿ ಪಾಲ್ಗೊಳ್ಳುವರು. ನರಗುಂದ ವಿಧಾನಸಭಾ ಮತಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಬೇಕೆಂದು ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಚ್. ಶಿವನಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.