ಗದಗ

ಜೆಡಿಎಸ್ ಅಧಿಕಾರಕ್ಕೆ: ಹಾವಿನಾಳ

Published On :

ಗಜೇಂದ್ರಗಡ: ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ಭ್ರಷ್ಟಾಚಾರ, ಸ್ವಜನ ಪಕ್ಷಪಾತದಿಂದ ಜನತೆ ಬೇಸತ್ತಿದ್ದಾರೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಜೆಡಿಎಸ್‌ಗೆ ಸಂಪೂರ್ಣ ಬೆಂಬಲಿಸಿ ಜೆಡಿಎಸ್ ಅಧಿಕಾರಕ್ಕೆ ತರಲಿದ್ದಾರೆಂದು ರೋಣ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೇಮಗಿರೀಶ ಹಾವಿನಾಳ ಹೇಳಿದರು.
ಈಚೆಗೆ ಅವರು ಸ್ಥಳೀಯ ಹಿಂದುಳಿದ ಸಮುದಾಯ ಬಡಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತೊರೆದ ಭೋವಿ ಹಾಗೂ ಭಜಂತ್ರಿ ಜನಾಂಗದ ಮುಖಂಡರನ್ನು ಜೆಡಿಎಸ್‌ಗೆ ಬರಮಾಡಿಕೊಂಡು ಮಾತನಾಡಿದರು. ರಾಷ್ಟ್ರೀಯ ಪಕ್ಷಗಳಿಂದ ಅಭಿವೃದ್ಧಿ ಅಸಾಧ್ಯ ಎಂಬುದು ಜನತೆಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ತತ್ವ, ಸಿದ್ಧಾಂತ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇವಲ 20 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಹಲವು ಯೋಜನೆಗಳನ್ನು ನೀಡಿದ್ದಾರೆ. ಈ ಬಾರಿ ರಾಜ್ಯಾದ್ಯಂತ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿ, ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆಂದರು.
ಮುತ್ತಣ್ಣ ಉಳ್ಳಾಗಡ್ಡಿ, ಮಾರುತಿ ನಿಡಗುಂದಿ, ರಾಜು ಲಕ್ಕಲಕಟ್ಟಿ, ಗಿಡ್ಡಪ್ಪ ಲೆಕ್ಕಿಗಿಡದ, ಷಣ್ಮುಕಪ್ಪ ಚಿಲಝರಿ, ಗಣೇಶ ನಿಡಗುಂದಿ, ದುರುಗಪ್ಪ ಕಲ್ಲೋಡ್ಡರ, ಸತ್ಯಪ್ಪ ಭಜಂತ್ರಿ, ಹನುಮಂತಪ್ಪ ಭಜಂತ್ರಿ, ಲಕ್ಷ್ಮಣ ಭಜಂತ್ರಿ, ಮಂಗಳೇಶ ಭಜಂತ್ರಿ, ಯಮನೂರ ನಂದಿಹಾಳ, ಸಂತೋಷ ಬಂಕದ, ಬೇಲೂರಪ್ಪ ಪೂಜಾರ ಮುಂತಾದವರು ಜೆಡಿಎಸ್ ಸೇರ್ಪಡೆಗೊಂಡರು. ಡಾ. ಮಂಜುನಾಥ ವಿಶ್ವಬ್ರಾಹ್ಮಣ, ಮಕ್ತುಂಸಾಬ ಸಾಗರ, ಉಮೇಶ ಮಲ್ಲಾಪುರ, ಸಂಗಪ್ಪ ಯಲಬುಣಚಿ, ಉಮೇಶ ಹಿರೇಗೌಡರ, ಶರಣಪ್ಪ ಪೂಜಾರ, ಬಸವರಾಜ ಮಾಳೋತ್ತರ, ಕೊಟ್ರೇಶ ಮುತ್ತೂರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.