ಮೊಬೈಲ್ ಸಂದೇಶ: ನಿಯಮ ಪಾಲಿಸಿ
ಗದಗ: ಭಾರತ ಚುನಾವಣಾ ಆಯೋಗದ ನೀತಿ ನಿಯಮಾವಳಿಯಂತೆ ಮೊಬೈಲ್ ಅಥವಾ ಧ್ವನಿ ಸಂದೇಶ ಕಳುಹಿಸುವುದು ವಾಣಿಜ್ಯ ಪ್ರಚಾರದ ಭಾಗವೆಂದು ಪರಿಗಣಿಸಿರುವುದರಿಂದ ಪ್ರಸಕ್ತ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಥವಾ ಅಂತಹ ಅಭ್ಯರ್ಥಿಗಳ ಬೆಂಬಲಿಗರು ಮೊಬೈಲ್ ಸಮೂಹ ಸಂದೇಶದ ಮೂಲಕ ಪ್ರಚಾರ ಕೈಗೊಳ್ಳುವ ಪ್ರಸಂಗವಿದ್ದಲ್ಲಿ ಚುನಾವಣಾ ಆಯೋಗ ನಿರ್ದಿಷ್ಟಪಡಿಸಿದ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೊಬೈಲ್ ಸಂದೇಶ ಕಳುಹಿಸುವವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಅಧ್ಯಕ್ಷರಾಗಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಉಸ್ತುವಾರಿ ಸಮಿತಿಗೆ ನಿಗಧಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ, ಸಂದೇಶದ ವಿವರ, ಸಮಯ ಹಾಗೂ ತಗುಲುವ ಖರ್ಚು-ವೆಚ್ಚಗಳನ್ನು ತಿಳಿಸಿ ಪರವಾನಿಗೆ ಪಡೆಯುವುದು ಅಗತ್ಯ. ಅಲ್ಲದೆ ಜಾಹೀರಾತಿನ ಖರ್ಚು-ವೆಚ್ಚದ ವಿವರಗಳನ್ನು ಸಂಬಂಧಿಸಿದ ಮತಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ತಪ್ಪಿದಲ್ಲಿ ಚುನಾವಣಾ ಆಯೋಗದ ನಿಯಮಾವಳಿಯಂತೆ ದಂಡನೆಗೆ ಗುರಿಪಡಿಸಲಾಗುವುದು. ಮೊಬೈಲ್ ಸಮೂಹ ಸಂದೇಶದ ಮೂಲಕ ಪ್ರಚಾರ ಕೈಗೊಂಡ ಬಗ್ಗೆ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಚುನಾವಣಾ ಸಹಾಯವಾಣಿ 1950 ಅಥವಾ 08372-220600 ಈ ಸಂಖ್ಯೆಗೆ ಉಚಿತ ಕರೆ ಮಾಡಿ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

