ಗದಗ

ಕೆಜೆಪಿಯಿಂದ ರಾಜ್ಯದ ಹಿತರಕ್ಷಣೆ

Published On :

ಗದಗ: ಜಿಲ್ಲೆ ಸೇರಿದಂತೆ ರಾಜ್ಯದ ಹಿತರಕ್ಷಣೆಗೆ ಬದ್ಧವಾಗಿರುವ ಮಾಜಿ ಸಿಎಂ ಬಿಎಸ್‌ವೈ ನೇತೃತ್ವದ ಕರ್ನಾಟಕ ಜನತಾ ಪಕ್ಷ ಬೆಂಬಲಿಸಿ ತಾಲೂಕಿನ ಮತದಾರರು ಹೊಸ ಭಾಷ್ಯ ಬರೆಯಬೇಕೆಂದು ಗದಗ ವಿಧಾನಸಭೆ ಮತಕ್ಷೇತ್ರದ ಕೆಜೆಪಿ ಅಭ್ಯರ್ಥಿ ಎಸ್.ಬಿ. ಸಂಕಣ್ಣವರ ಮತದಾರರಲ್ಲಿ ಮನವಿ ಮಾಡಿದರು.
ಗುರುವಾರ ನಗರದ ನಾಲ್ವಾಡದವರ ಓಣಿಯಲ್ಲಿ ನಡೆದ ಕೆಜೆಪಿ ಪ್ರಚಾರ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು. ರಾಷ್ಟ್ರೀಯ ಪಕ್ಷಗಳನ್ನು ನಂಬಿ ಭ್ರಮನಿರಸನಗೊಂಡಿರುವ ಜನತೆ ಈ ಬಾರಿ ಕೆಜೆಪಿಯನ್ನು ಬೆಂಬಲಿಸಿ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ ಮಾಜಿ ಸಿಎಂ ಯಡಿಯೂರಪ್ಪ ಅವರ ಕೆಜೆಪಿ ರಾಷ್ಟ್ರೀಯ ಪಕ್ಷಗಳಲ್ಲಿರುವ ಎಲ್ಲ ನ್ಯೂನತೆಗಳನ್ನು ನಿವಾರಿಸಿಕೊಂಡು ರಾಜ್ಯದ ಸರ್ವಾಂಗೀಣ ಹಿತಕ್ಕೆ ಬದ್ಧವಾಗಿದೆ ಎಂದರು.
ಸದು ಮದರಿಮಠ ಮುಂತಾದವರು ಮಾತನಾಡಿದರು.  ಸಿದ್ದು ಪಲ್ಲೇದ, ಶ್ರೀನಿವಾಸ ಹುಬ್ಬಳ್ಳಿ, ರಜಾಕ ಡಂಕೇದ, ಇರ್ಶಾದ ಮಾನ್ವಿ, ಸೈಯದಖಾಲಿದ್ ಕೊಪ್ಪಳ, ಅಮರೇಶ ಅಂಗಡಿ, ಕೆ.ಪಿ. ಗುಳಗೌಡ್ರ ಮುಂತಾದವರು ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದರು. ಇದೇ ವೇಳೆ, ಕೆಜೆಪಿ ಅಭ್ಯರ್ಥಿ ಎಸ್.ಬಿ. ಸಂಕಣ್ಣವರ ಸಮ್ಮುಖದಲ್ಲಿ ಹಲವರು ಕೆಜೆಪಿ ಸೇರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.