ಬಿದರೂರಿಂದ ಅಭಿವೃದ್ಧಿ ಕಾರ್ಯ: ಪಿಳ್ಳಿ
ಕನ್ನಡಪ್ರಭ ವಾರ್ತೆ, ಗದಗ, ಏ. 22
ಗದಗ ಕ್ಷೇತ್ರದಲ್ಲಿ ವೈದ್ಯಕೀಯ ಮಹಾವಿದ್ಯಾಲಯ, ಪಾಲಿಟೆಕ್ನಿಕ್ ಕಾಲೇಜು, ಪಶು ವೈದ್ಯಕೀಯ ಮಹಾವಿದ್ಯಾಲಯ, ದಂತ ಶೈಕ್ಷಣಿಕ ಸಂಸ್ಥೆಗಳ ಪ್ರಗತಿ ಹೀಗೆ ಹಲವಾರು ಜನಪರ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ಶ್ರೀಶೈಲಪ್ಪ ಬಿದರೂರ ಅವರಿಗೆ ನಿಮ್ಮ ಮತ ಮೀಸಲಾಗಿರಲಿ ಎಂದು ನಗರಸಭೆ ಸದಸ್ಯ ಸದಾನಂದ ಪಿಳ್ಳಿ ಹೇಳಿದರು.
ಈಚೆಗೆ ಅವರು ನಗರದ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದರು. ಗದಗ ಮತಕ್ಷೇತ್ರವನ್ನು ಅಭಿವೃದ್ಧಿ ಗೊಳಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ ಶಾಸಕ ಶ್ರೀಶೈಲಪ್ಪ ಬಿದರೂರ ಅವರ ಕಾರ್ಯ ಶ್ಲಾಘನೀಯ. ಗದಗ-ಬೆಟಗೇರಿ ಅವಳಿ ನಗರದ ಪ್ರಮುಖ ರಸ್ತೆಗಳನ್ನು ದ್ವಿಪಥ ರಸ್ತೆಗಳನ್ನಾಗಿ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಬೆಂಬಲಿಸುವ ಮೂಲಕ ಬಿದರೂರ ಅವರನ್ನು ಆಯ್ಕೆಗೊಳಿಸುವಂತೆ ಕೋರಿದರು.
ನಗರಸಭೆಯ ಮಾಜಿ ಸದಸ್ಯ ಹಾಗೂ ಗದಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪರಶುರಾಮ ಹೆಬಸೂರ, ನಗರಸಭೆ ಮಾಜಿ ಉಪಾಧ್ಯಕ್ಷ ಶ್ರೀನಿವಾಸ ಭಾಂಡಗೆ ಮಾತನಾಡಿ, ಅವಳಿ ನಗರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಕೋಟಿ ವೆಚ್ಚದಲ್ಲಿ 2 ನೇ ಹಂತದ ಕುಡಿಯುವ ನೀರಿನ ಯೋಜನೆ ಚಾಲನೆಗೊಳಿಸಿದ್ದು, ಎರಡು ವರ್ಷದಲ್ಲಿ ಯೋಜನೆ ಪೂರ್ಣಗೊಳ್ಳಲ್ಲಿದೆ ಎಂದರು. ಎಂ.ಎಂ. ಹಿರೇಮಠ ಮಾತನಾಡಿದರು. ಜಗದೀಶ ನೀಲಕಂಠಮಠ, ಹೊನಗುಡಿ ಛಗನ್ ರಾಜಪುರೋಹಿತ್, ಆನಂದ ಶ್ಯಾವಿ, ಬಸವರಾಜ ಚವಡಕಿ, ಎ.ಎನ್. ತಿಕ್ಕಣ್ಣವರ, ಮಂಜು ವಸ್ತ್ರದ, ಬಸವರಾಜ ಶೀರಿ, ನೀಲಪ್ಪ ನಿಂಬಣ್ಣಗೌಡ್ರ, ನಾಗರಾಜ ಗಣಾಚಾರಿ, ಮಹೇಶ ಕೋಟಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

