ಶರಣಪ್ಪ ಭಗವತಿ ಕಾಂಗ್ರೆಸ್ ಸೇರ್ಪಡೆ
ರೋಣ: ಬಿಎಸ್ಆರ್ ಪಕ್ಷದ ರೋಣ ತಾಲೂಕು ಘಟಕದ ಅಧ್ಯಕ್ಷ ಶರಣಪ್ಪ ಭಗವತಿ ಭಾನುವಾರ ತಾಲೂಕಿನ ತಳ್ಳಿಹಾಳ ಗ್ರಾಮದಲ್ಲಿ ಮತ ಯಾಚನೆಗೆಂದು ತೆರಳಿದ್ದ ಮಾಜಿ ಶಾಸಕ ಜಿ.ಎಸ್. ಪಾಟೀಲ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಶರಣಪ್ಪ ಭಗವತಿ ಮಾತನಾಡಿ, ಮಾಜಿ ಶಾಸಕ ಜಿ.ಎಸ್. ಪಾಟೀಲ ಅವರ ಕಾರ್ಯವೈಖರಿ, ಅಭಿವೃದ್ಧಿಪರ ಯೋಜನೆಗಳು, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಮೇಲೆ ಇವರಿಗಿರುವ ಕಳಕಳಿ ಹಾಗೂ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ, ನಾನು ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದೇನೆ. ರೋಣ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯಾಗಲು ಕಾಂಗ್ರೆಸ್ ಗೆಲ್ಲಿಸಬೇಕು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ ಉತ್ತಮ ಭವಿಷ್ಯವಿದೆ ಎಂದರು.
ಜಿಪಂ ಮಾಜಿ ಅಧ್ಯಕ್ಷ ಎನ್.ಎಸ್. ಕೆಂಗಾರ, ಎಪಿಎಂಸಿ ಸದಸ್ಯ ಪರಶುರಾಮ ಅಳಗವಾಡಿ, ವಿ.ಆರ್. ಗುಡಿಸಾಗರ, ಪಿಎಲ್ಡಿ ಬ್ಯಾಂಕ್ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಅಮೃತಗೌಡ ಗೌಡರ, ವಿಶ್ವನಾಥ ಜಿಡ್ಡಿಬಾಗಿಲ, ಶಿವಣ್ಣ ನವಲಗುಂದ, ಮೋಹನಸಾ ರಾಯಬಾಗಿ, ಚಂಬಣ್ಣ ಚವಡಿ, ಬಸವರಾಜ ಪಾಟೀಲ, ಲಿಂಗರಾಜ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

