ವೀಕ್ಷಕರ ನೇಮಕ
ಗದಗ: ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ, ಗದಗ, ರೋಣ ಹಾಗೂ ನರಗುಂದ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣಾ ವೀಕ್ಷಕರ, ಅಭ್ಯರ್ಥಿಗಳ ಚುನಾವಣಾ ವೆಚ್ಚಗಳ ವೀಕ್ಷಕರ ಮತ್ತು ಪೊಲೀಸ್ ವೀಕ್ಷಕರನ್ನು ನೇಮಿಸಲಾಗಿದೆ. ಶಿರಹಟ್ಟಿ ಪರಿಶಿಷ್ಟ ಜಾತಿ ವಿಧಾನಸಭಾ ಕ್ಷೇತ್ರಕ್ಕೆ ಜಿ. ಫಣೀಂದ್ರಕುಮಾರ್ ರಾವ್ (ಮೊ. 9448891753), ಗದಗ ವಿಧಾನಸಭಾ ಕ್ಷೇತ್ರಕ್ಕೆ ಕೆ.ಆರ್. ಭಾರತಿ (9448896572), ರೋಣ ಕ್ಷೇತ್ರಕ್ಕೆ ಆರ್.ಆರ್. ಸಹಾಯ್(9448893584) ಮತ್ತು ನರಗುಂದ ವಿಧಾನಸಭಾ ಕ್ಷೇತ್ರಕ್ಕೆ ಶಿವಾನಂದ ಓಝಾ (9448902861) ಅವರನ್ನು ವೀಕ್ಷರನ್ನಾಗಿ ನಿಯೋಜಿಸಲಾಗಿದೆ. ಶಿರಹಟ್ಟಿ, ಗದಗ ಹಾಗೂ ರೋಣ ವಿಧಾನಸಭಾ ಕ್ಷೇತ್ರಕ್ಕೆ ಬಿ.ಪಿ. ಯಾದವ್ (9886875971), ನರಗುಂದ-ಅರುಣಕುಮಾರ ಯಾದವ್ (9886871062) ಅಭ್ಯರ್ಥಿಗಳ ಚುನಾವಣಾ ವೆಚ್ಚಗಳ ವೀಕ್ಷಕರಾಗಿದ್ದಾರೆ. ಶಿರಹಟ್ಟಿ (ಪಜಾ), ಗದಗ, ರೋಣ, ನರಗುಂದ ವಿಧಾನಸಭಾ ಕ್ಷೇತ್ರಗಳಿಗೆ ಪರಮಜಿತ್ ಸಿಂಗ್ ಅಹಲವಾತ (9448891326) ಅವರನ್ನು ಪೊಲೀಸ್ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಗದಗ ಜಿಲ್ಲಾಧಿಕಾರಿ ಕಚೇರಿಯ ಕೊಠಡಿ ಸಂಖ್ಯೆ 27ರಲ್ಲಿ ಸ್ಥಾಪಿಸಲಾದ ಕಂಟ್ರೋಲ್ ರೂಂ ದೂ. 08372-220180 ಹಾಗೂ ಟೋಲ್ಫ್ರೀ ದೂ. 08372-220600 ಸೌಲಭ್ಯ ಕಲ್ಪಿಸಿದ್ದು, ಸಾರ್ವಜನಿಕರು ಚುನಾವಣೆ ಕುರಿತು ಮಾಹಿತಿ ಪಡೆಯಲು ಅಥವಾ ದೂರು ನೀಡಲು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಾಂಡುರಂಗ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

