ಗದಗ

20 ಚೆಕ್ಪೋಸ್ಟ್ ಕಾರ್ಯಾರಂಭ

Published On :

ಗದಗ: ಮತದಾರರನ್ನು ಸೆಳೆಯುವ ಉದ್ದೇಶದಿಂದ ಹಣ, ಮದ್ಯ, ಸೀರೆ ಸೇರಿದಂತೆ ಇನ್ನಿತರ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ಮಾಡುವುದನ್ನು ತಡೆಯಲು ಜಿಲ್ಲೆಯಲ್ಲಿ 16 ಚೆಕ್ಪೋಸ್ಟ್ ಇದ್ದು, ಹೆಚ್ಚುವರಿಯಾಗಿ 4 ಚೆಕ್ಪೋಸ್ಟ್ ಮಂಗಳವಾರದಿಂದ ಪ್ರಾರಂಭಿಸಲಾಗಿದ್ದು, ಒಟ್ಟು 20 ಚೆಕ್ಪೋಸ್ಟ್ಗಳು ಕಾರ್ಯಾರಂಭ ಮಾಡಲಿವೆ ಎಂದು ಎಸ್ಪಿ ಎಸ್.ಡಿ. ಶರಣಪ್ಪ ಹೇಳಿದರು.
ಅವರು ಸೋಮವಾರ ರಾತ್ರಿ ನಗರದ ಎಸ್ಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾದ್ಯಂತ 20 ಚೆಕ್ಪೋಸ್ಟ್ ರಚಿಸಲಾಗಿದೆ. ಇವು ಅಕ್ರಮ ಹಣ, ಮದ್ಯ, ಸೀರೆ ಸೇರಿದಂತೆ ಮತದಾರರನ್ನು ಸೆಳೆಯುವ ಉದ್ದೇಶದಿಂದ ಅಕ್ರಮವಾಗಿ ಸಾಗಾಟ ತಡೆಗಟ್ಟಲು ಈ ಚೆಕ್ಪೋಸ್ಟ್ ರಚಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 196 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿರುವ ಈ ಹಿಂದೆ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವ 78 ಜನರ ಮೇಲೆ ಮುಂಜಾಗ್ರತಾ ಕ್ರಮವಾಗಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ 68 ಪ್ರಕರಣಗಳು, ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಭಯಪಡಿಸುವುದು ಹಾಗೂ ಮತ್ತಿತರ ದುರ್ವರ್ತನೆ ನಡೆಸಿರುವುದಕ್ಕಾಗಿ 75 ಪ್ರಕರಣ ದಾಖಲಿಸಲಾಗಿದೆ. ಒಟ್ಟು 271 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳು 745 ಲೀಟರ್ ಹಾಗೂ ಅಬಕಾರಿ ಮತ್ತು ಲಾಟರಿ ನಿಷೇಧ ದಳದ ಪೊಲೀಸರು 862 ಲೀಟರ್ ಸೇರಿದಂತೆ ಒಟ್ಟು ರು. 4.16 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಭಾನುವಾರ ಗದಗ ಚೆಕ್ಪೋಸ್ಟ್ನಲ್ಲಿ ರು. 3.89 ಲಕ್ಷ ಹಣ ಮತ್ತು ಮುಂಡರಗಿಯಲ್ಲಿ ಅಕ್ರಮವಾಗಿ ಮತದಾರರಿಗೆ ನೀಡುತ್ತಿದ್ದ 40 ಸೀರೆ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ವಿಚಾರಣೆ ನಡೆಸಲಾಗುತ್ತಿದೆ.  ಜಿಲ್ಲೆಯಲ್ಲಿ ಮತದಾರರು ಯಾವುದೇ ರೀತಿಯ ಆಸೆ, ಆಮಿಷಗಳಿಗೆ ಒಳಗಾಗದೇ ಮುಕ್ತವಾಗಿ ಮತದಾನ ಮಾಡುವ ಉದ್ದೇಶದಿಂದ ಜಿಲ್ಲಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 4 ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಅಲ್ಲದೇ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ವೀಕ್ಷಕರಾಗಿ ಹರಿಯಾಣಾದ ಪರಮಜಿತ್ಸಿಂಗ್ ಅಹಲಾವತ ಎಂಬುವರನ್ನು ನೇಮಕ ಮಾಡಲಾಗಿದ್ದು, ಇವರು ನಗರದ ಪ್ರವಾಸಿ ಮಂದಿರದಲ್ಲಿ ವಾಸವಾಗಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ಮೊ. 9448891326ಗೆ ಸಂಪರ್ಕಿಸುವಂತೆ ತಿಳಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.