ಬಿಎಸ್ಆರ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ: ಶ್ರೀರಾಮುಲು
ನರಗುಂದ: ರಾಜ್ಯದಲ್ಲಿ ಬಿಎಸ್ಆರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ರೈತ ಸಮುದಾಯವು ಕೃಷಿಗೆ ಮಾಡಿದ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ, ಬಡವರಿಗೆ ಪ್ರತಿ ತಿಂಗಳು ಆಹಾರ ಧಾನ್ಯವನ್ನು ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ. ಶ್ರೀರಾಮುಲು ಹೇಳಿದರು.
ಅವರು ಸೋಮವಾರ ಪಟ್ಟಣದ ಗಾಂಧಿ ಚೌಕ್ನಲ್ಲಿ ನರಗುಂದ ಮತಕ್ಷೇತ್ರದ ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಚ್. ಶಿವನಗೌಡ್ರ ಪರ ಮತಯಾಚನೆ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಬಡವರ, ಶ್ರಮಿಕರ ಪಕ್ಷ ಎಂದು ಕರೆಯುವ ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಈ ಚುನಾವಣೆಯಲ್ಲಿ ಅಧಿಕಾರಕ್ಕೆ ತಂದರೆ 1ನೇ ತರಗತಿಯಿಂದ ಇಂಗ್ಲಿಷ್ ಕಲಿಕೆ, ಡಿಗ್ರಿ ಪೂರ್ಣಗೊಳಿಸಿದ ಯುವಕರಿಗೆ ಪ್ರತಿ ತಿಂಗಳು ರು. 5 ಸಾವಿರ ಮಾಸಾಶನ, 24 ಗಂಟೆ ವಿದ್ಯುತ್ ಪೂರೈಕೆ ಇನ್ನೂ ಹಲವಾರು ಯೋಜನಗಳನ್ನು ಜಾರಿಗೆ ತರುತ್ತೇವೆ. ಆದ್ದರಿಂದ ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಮತ ನೀಡುವಂತೆ ಕೋರಿದರು.
ಕಾಂಗ್ರಸ್ನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡುವ ನೈತಿಕತೆ ಅವರಿಗಿಲ್ಲ. ತಮ್ಮ ಪಕ್ಷದಲ್ಲಿರುವ ಗೊಂದಲಗಳನ್ನು ಸರಿಪಡಿಸಿಕೊಳ್ಳುವ ತಾಕತ್ತು ಇವರಿಗಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆಂದು ಈಗಾಗಲೇ ನಾನು ಸಿಎಂ, ನಾನು ಸಿಎಂ ಎಂದು ಪೈಪೋಟಿಗೆ ಇಳಿದ ನಾಯಕರ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಮೇಲಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಅರ್ಹರಲ್ಲ. ಈ ಬಾರಿ ರಾಜ್ಯದಲ್ಲಿ ಬಿಎಸ್ಆರ್ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಚ್. ಶಿವನಗೌಡ್ರ, ಲೀಲಕ್ಕ ಹಸಿಬಿ, ರವಿ ಪೂಜಾರ, ಮಮತಾಜಿ ಸವಟಿಗಿ, ಮೋಹನ ನಾಗಪ್ಪನವರ, ಮಹೇಶಗೌಡ ಮೇಟಿ, ಸುಭಾಸಚಂದ್ರ ದಾನರಡ್ಡಿ, ಶಿವಾನಂದ ಚೌಡಿಕಿ, ದಾನೇಶ ಪಾರ್ಕೆ, ಸಾಧಿಕ ಮುಂತಾದವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

