ಶಿರಹಟ್ಟಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ: ಲಮಾಣಿ
ಲಕ್ಷ್ಮೇಶ್ವರ: ಮುಂದಿನ ದಿನಗಳಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಮತ ನೀಡಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಮನವಿ ಮಾಡಿಕೊಂಡರು.
ಅವರು ಸಮೀಪದ ಗೊಜನೂರ ಗ್ರಾಮದಲ್ಲಿ ನಡೆಸಿದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಶಿರಹಟ್ಟಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಕಂಕಣ ಬದ್ಧನಾಗಿದ್ದೇನೆ. ತಾಲೂಕಿನ ಮತದಾರರು ಅಭಿವೃದ್ಧಿಯ ಪರವಾಗಿರುವ ನನಗೆ ಮತ ನೀಡಬೇಕು ಎಂದು ವಿನಂತಿಸಿದರು.
ಶಿರಹಟ್ಟಿ ತಾಲೂಕಿನಲ್ಲಿ ಬಹು ಗ್ರಾಮ ಕುಡಿವ ಯೋಜನೆಯನ್ನು ಮಂಜೂರಿ ಮಾಡಿಸಿದ್ದೇನೆ. ಸುಮಾರು 36 ಹಳ್ಳಿಗಳಿಗೆ ರು. 33 ಕೋಟಿ ವೆಚ್ಚದಲ್ಲಿ ಶುದ್ಧ ಕುಡಿವ ನೀರಿನ ಯೋಜನೆಯನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದರು.
ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ ಮಾತನಾಡಿದರು. ಬಸಣ್ಣ ಹತ್ತಿಕಾಳ, ದೇವಣ್ಣ ಬಳಿಗಾರ. ಡಾ. ವೈ.ಎಫ್. ಹಂಜಿ, ಚಂಬಣ್ಣ ಬಾಳಿಕಾಯಿ, ಸೋಮಣ್ಣ ಮುಳಗುಂದ, ತಾಪಂ ಮಾಜಿ ಸದಸ್ಯ ಸುಭಾಷ ಬಟಗುರ್ಕಿ, ಪುರಸಭೆ ಮಾಜಿ ಸದಸ್ಯ ನಿಂಗಪ್ಪ ಬನ್ನಿ, ಲೆಂಕೆಪ್ಪ ಸೆರಸೂರಿ, ಸೋಮಸಿಂಗ್ ಲಮಾಣಿ. ರಾಮಣ್ಣ ಅಕ್ಕಿಗುಂದ, ಮುತ್ತಣ್ಣಶೆಟ್ರು ವಡಕಣ್ಣವರ, ಹನುಮಂತಗೌಡ ದೊಡ್ಡಗೌಡರ, ರಾಮನಗೌಡ ಪಾಟೀಲ, ಎಸ್.ವಿ. ಕಣವಿ, ಬಾಬಣ್ಣ ಜಕ್ಕನಗೌಡರ, ನಾಗನಗೌಡ ಪಾಟೀಲ, ಹನುಮಂತಗೌಡ ಪಾಟೀಲ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

