ಗದಗ ಡಿಸಿ ಅಂಜನಕುಮಾರ್ ಅಧಿಕಾರ ಸ್ವೀಕಾರ
ಗದಗ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಟಿ. ಅಂಜನಕುಮಾರ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ಈ ಹಿಂದಿನ ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ವರ್ಗಾವಣೆಯಿಂದ ತೆರವಾದ ಸ್ಥಾನವನ್ನು ಅಲಂಕರಿಸಿದರು. ಎಸ್.ಟಿ. ಅಂಜನಕುಮಾರ್ ಚಿಕ್ಕಮಗಳೂರು ಜಿಲ್ಲಾಧಿಕಾರಿ, ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ವಿವಿಧ ಜವಾಬ್ದಾರಿಯುತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಇಂದು ಬಸವ ಜಯಂತಿ ಶತಮಾನೋತ್ಸವ
ನರಗುಂದ: ತಾಲೂಕಿನ ಶಿರೋಳ ಗ್ರಾಮದ ತೋಂಟದಾರ್ಯ ಮಠದಲ್ಲಿ ಏ. 26ರಂದು ಬೆಳಗ್ಗೆ 10 ಗಂಟೆಗೆ ಬಸವ ಜಯಂತಿ ಆಚರಣೆಯ ಶತಮಾನೋತ್ಸವ ಕಾರ್ಯಕ್ರಮ ಜರುಗುತ್ತದೆ. ಈ ಸಮಾರಂಭಕ್ಕೆ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತ ಆನಂದಪುರದ ಬೆಕ್ಕಿನ ಕಲ್ಮಠ, ಶ್ರೀಕ್ಷೇತ್ರದ ಡಾ. ಮಲ್ಲಿಕಾರ್ಜುನ ಶ್ರೀಗಳಿಗೆ ಗುರುವಂದನ ಕಾರ್ಯಕ್ರಮ ಜರುಗುತ್ತದೆ. ಈ ಕಾರ್ಯಕ್ರಮಕ್ಕೆ ಶಿರೋಳ-ಚಿಂಚಿಣೆ ಗುರುಬಸವ ಶ್ರೀಗಳು, ಭೈರನಹಟ್ಟಿ ದೊರಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು, ಶೇಖರಯ್ಯ ನಾಗಲೋಟಮಠ, ನಾಗನಗಾಡ ತಿಮ್ಮನಗೌಡ್ರ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

