ಗದಗ

ಕ್ಷೇತ್ರಾಭಿವೃದ್ಧಿ ಮಾಡಿದ ತೃಪ್ತಿ ಇದೆ: ಬಿದರೂರ

Published On :

ಗದಗ: ಐದು ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಮತಕ್ಷೇತ್ರವನ್ನು ಅಭಿವೃದ್ಧಿಗೊಳಿಸಿದ ತೃಪ್ತಿ ಇದೆ ಎಂದು ಶಾಸಕ, ಗದಗ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಶೈಲಪ್ಪ ಬಿದರೂರ ಹೇಳಿದರು.
ಈಚೆಗೆ ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಬಿಜೆಪಿಯ ಗದಗ ವಿಧಾನಸಭಾ ಮತಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, 50 ವರ್ಷಗಳಲ್ಲಿ ಆಗದ ಅಭಿವೃದ್ಧಿ ಕಾರ್ಯಗಳನ್ನು ಕೇವಲ 5 ವರ್ಷಗಳಲ್ಲಿ ಮಾಡಲು ಶ್ರಮಿಸಿದ್ದೇನೆ.
ಪ್ರಾಮಾಣಿಕ ಪ್ರಯತ್ನದಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಾಹಿತ್ಯಿಕ, ಆರೋಗ್ಯ, ಕಂದಾಯ, ಕೃಷಿ, ಅರಣ್ಯ, ತೋಟಗಾರಿಕೆ, ಸಹಕಾರ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದಿದ್ದೇನೆ. ಗದಗ ಜನತೆಯ ಬಹು ದಿನಗಳ ಬೇಡಿಕೆಯಾಗಿದ್ದ ಶಾಶ್ವತ ಕುಡಿವ ನೀರಿನ 2ನೇ ಹಂತದ ರು. 100 ಕೋಟಿ ವೆಚ್ಚದ ಕಾರ್ಯವನ್ನು ವಿಶ್ವ ಬ್ಯಾಂಕ್ ಸಹಯೋಗದಲ್ಲಿ ಪ್ರಾರಂಭಿಸಲಾಗಿದೆ ಎಂದರು. ಕ್ಷೇತ್ರದ ಮತದಾರರು ತಮ್ಮ ಕಾರ್ಯಗಳನ್ನು ಗುರುತಿಸಿ ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಕೋರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎಸ್. ಕರಿಗೌಡ್ರ, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರಾ. ಎಸ್.ವಿ. ಸಂಕನೂರ ಮಾತನಾಡಿದರು. ಜಯದೇವ ಮೆಣಸಗಿ, ಬಾಬಣ್ಣ ಮಾನ್ವಿ, ಮೋಹನ ಮಾಳಶೆಟ್ಟಿ, ಶಿರಾಜ ಬಳ್ಳಾರಿ, ತೋಟೋಸಾ ಭಾಂಡಗೆ, ಪರಶುರಾಮ ಹೆಬಸೂರ, ಸದಾನಂದ ಪಿಳ್ಳಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.