ಗದಗ

ಸಿಡಿಲು ಬಡಿದು ಓರ್ವ ಸಾವು: ಅಪಾರ ಹಾನಿ

Published On :

ಮುಂಡರಗಿ: ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವ ಅಂಗಡಿಗೆ ಸಿಡಿಲು ಬಡಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಅಲ್ಲಿಯೇ ಮಲಗಿದ್ದ ಚಂದ್ರಪ್ಪ ಸೋಮಪ್ಪ ಕೋಡಿಹಳ್ಳಿ (50) ಎಂಬುವರು ಸಾವನ್ನಪ್ಪಿದ್ದಾರೆ.
ಪತ್ನಿ ದೇವಕ್ಕ, ಮಗಳು ಸುಮಂಗಲಾ ಹಾಗೂ ಮಗ ಚೆನ್ನಪ್ಪ ಮತ್ತು ಶಿವರಾಜ ಎನ್ನುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವ ಮಗನ ಕೈ ಸುಟ್ಟಿದ್ದು, ಅವರನ್ನು ಚಿಕಿತ್ಸೆಗಾಗಿ ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಮ್ಮಿಗಿ ಗ್ರಾಮಕ್ಕೆ ತಹಸೀಲ್ದಾರ್ ಡಿ.ಎಚ್. ನಾಯಕ ಭೇಟಿ ನೀಡಿ, ಸಿಡಿಲು ಬಡಿದು ಸಂಪೂರ್ಣ ಸುಟ್ಚಿರುವ ಅಂಗಡಿ ಹಾಗೂ ಮನೆಯನ್ನು ಪರಿಶೀಲಿಸಿದ್ದು, ಸುಮಾರು ರು. 10 ಲಕ್ಷದಷ್ಟು ಹಾನಿಯಾಗಿದೆ ಎಂದು ತಿಳಿಸಿದ್ದಾರೆ.
ಶಾಸಕ ಲಮಾಣಿ ಭೇಟಿ: ಶಾಸಕ ರಾಮಣ್ಣ ಲಮಾಣಿ ಹಮ್ಮಿಗಿ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವದಲ್ಲಿ ಸಿಡಿಲು ಬಡಿದ ಮೃತಪಟ್ಟ ವ್ಯಕ್ತಿಯ ಮನೆಗೆ ಭೇಟಿ ನೀಡಿ, ಮೃತ ವ್ಯಕ್ತಿಯ ಪತ್ನಿ ದೇವಕ್ಕ ಹಾಗೂ ಮಕ್ಕಳಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಕರಬಸಪ್ಪ ಹಂಚಿನಾಳ, ಕರಿಯಪ್ಪ ಹಡಗಲಿ, ಸುರೇಶ ಜೈನ್, ಆರ್.ಎಂ. ತಪ್ಪಡಿ, ಪ್ರಕಾಶ ಪಾಟೀಲ, ಮಲ್ಲಿಕಾರ್ಜುನ ಬಹದ್ದೂರ ದೇಸಾಯಿ, ಸೀತಾರಾಮರಾಜು, ರಾಮಾಂಜನೇಯರಾಜು ಪೆನ್‌ಮತ್ಸ ಸೇರಿದಂತೆ ಅನೇಕರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.