ಸ್ಥಿರ ಸರ್ಕಾರಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ: ಗಡ್ಡದೇವರಮಠ
ಲಕ್ಷ್ಮೇಶ್ವರ: ಐದು ವರ್ಷಗಳ ಅವಧಿಯಲ್ಲಿ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ಮತ್ತು ಅಧಿಕಾರಕ್ಕಾಗಿ ಕಿತ್ತಾಡುವುದರಲ್ಲಿಯೇ ಕಾಲ ಕಳೆದು, ರಾಜ್ಯದ ಜನರ ನಂಬಿಕೆಗೆ ದ್ರೋಹ ಮಾಡಿದೆ. ಈ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲು ಹಾಗೂ ಸ್ಥಿರ ಸರ್ಕಾರಕ್ಕಾಗಿ ಕಾಂಗ್ರೆಸ್ ಬೆಂಬಲಿಸಬೇಕೆಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಹೇಳಿದರು.
ಅವರು ಈಚೆಗೆ ಸಮೀಪದ ರಾಮಗೇರಿ, ಬಸಾಪುರ ಗ್ರಾಮದಲ್ಲಿ ಶಿರಹಟ್ಟಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಪರ ಮತದಾರರ ಮನೆ, ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದರು. ಬಸಾಪುರ ಗ್ರಾಮ ತಾಲೂಕಿನ ಕೊನೆಯ ಹಳ್ಳಿಯಾಗಿದ್ದು, ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಈ ಗ್ರಾಮ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಈ ಗ್ರಾಮಕ್ಕೆ ಮೂಲಭೂತ ಆವಶ್ಯಕತೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕವಾಗಿ ಆದ್ಯತೆ ನೀಡುತ್ತೇವೆ. ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಂತೆ ಕೋರಿದರು.
ಲಕ್ಷ್ಮೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಅಂಗಡಿ, ಬಸಣ್ಣ ಬೆಟಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಅಂಗಡಿ, ಸೋಮಣ್ಣ ಬೆಟಗೇರಿ, ಮಲ್ಲಯ್ಯ ಭಕ್ತಿಮಠ, ಶೇಖಪ್ಪ ವಾಲ್ಮಿಕಿ, ನಾಗರಾಜ ಮಡಿವಾಳರ, ನೀಲಪ್ಪ ಶರಸೂರಿ, ಮಂಜುನಾಥ ಸಾತಪುತೆ, ಗಂಗಾಧರ ಮುಳಗುಂದ, ಶಿವು ಕಬ್ಬೇರ ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

