ಗದಗ

ನಾಳೆ ಗದುಗಿಗೆ ಎಲ್.ಕೆ. ಆಡ್ವಾಣಿ

Published On :

ಗದಗ: ಬಿಜೆಪಿ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಸಭೆ ಏ. 29ರ ಸಂಜೆ 4.30ಕ್ಕೆ ಗದಗ ನಗರದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಜರುಗಲಿದೆ. ರಾಷ್ಟ್ರೀಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ. ಆಡ್ವಾಣಿ ಈ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಸಿಎಂ ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ, ಶಾಸಕ ಶ್ರೀಶೈಲಪ್ಪ ಬಿದರೂರ, ರಾಮಣ್ಣ ಲಮಾಣಿ ಮತ್ತು ಸಂಸದರು, ಶಾಸಕರು, ಪರಿಷತ್ ಸದಸ್ಯರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ. ಗದಗ ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಬೇಕು ಎಂದು ಜಿಲ್ಲಾಧ್ಯಕ್ಷ ಎಂ.ಎಸ್. ಕರಿಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.