ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ: ಪ್ರಕರಣ ದಾಖಲು
ಗದಗ: ಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಭಾನುವಾರ ಜರುಗಿದೆ. ಗದಗ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಅಂದಾನಯ್ಯ ಕುರ್ತಕೋಟಿಮಠ ತಮ್ಮ ಪಕ್ಷದ ಕಾರ್ಯಕರ್ತರ ಜತೆಗೆ ಮತಯಾಚನೆ ಮಾಡಲು ಹುಲಕೋಟಿ ಗ್ರಾಮಕ್ಕೆ ತೆರಳಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರಾದ ಪಾಂಡು ಕೋರಿ, ಚಂದ್ರಪ್ಪಗೌಡ ಎಂಬುವವರು ಜೆಡಿಎಸ್ ಪಕ್ಷದ ವಾಹನದ ಮೇಲಿದ್ದ ಜೆಡಿಎಸ್ ಪಕ್ಷದ ಧ್ವಜ, ಪ್ರಚಾರಕ್ಕೆ ಬಳಸಿದ ಹ್ಯಾಂಡ್‌ಬಿಲ್ ಕಿತ್ತುಕೊಂಡು ಈ ಗ್ರಾಮದಲ್ಲಿ ಯಾರೂ ಬರಕೂಡದು. ಕೇವಲ ಇಲ್ಲಿ ಕಾಂಗ್ರೆಸ್ ಮಾತ್ರ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಈ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಿದ್ದಾರೆ.
ನಾಳೆ ಹಿಂದುಳಿದ ವರ್ಗಗಳ ಸಮಾವೇಶ
ಗದಗ: ಸ್ಥಳೀಯ ಹುಬ್ಬಳ್ಳಿ ರಸ್ತೆಯಲ್ಲಿರುವ ವಿಠ್ಠಲಾರೂಢ ಸಮುದಾಯ ಭವನದಲ್ಲಿ ಏ. 30ರ ಬೆಳಗ್ಗೆ 10.30ಕ್ಕೆ ಹಿಂದುಳಿದ ವರ್ಗಗಳ ಸಮಾಜಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಖಟವಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

