ವಿದ್ಯಾರ್ಥಿಗಳು ಕೀಳರಿಮೆ ತೊರೆಯಬೇಕು
ಕನ್ನಡಪ್ರಭ ವಾರ್ತೆ, ಗದಗ, ಏ. 28
ಇಂದಿನ ಸ್ಪರ್ಧಾಯುಗದಲ್ಲಿ ಯಶಸ್ಸು ಸಾಧಿಸಲು ಸತತ ಪರಿಶ್ರಮ, ಪರಿಶ್ರಮದ ಜತೆಗೆ ಸರಿಯಾದ ಮಾರ್ಗ ಅದರ ಜತೆಗೆ ಸರಿಯಾದ ಯೋಜನೆ ರೂಪಿಸಿದರೆ ಜೀವನದಲ್ಲಿ ಯಶಸ್ಸು ನಿಶ್ಚಿತ. ವಿದ್ಯಾರ್ಥಿಗಳು ತಮ್ಮನ್ನು ತಾವು ಅರಿತು ತಮ್ಮಲ್ಲಿರುವ ಶಕ್ತಿ, ಕೌಶಲ್ಯಗಳನ್ನು ಪ್ರೋತ್ಸಾಹಿಸಬೇಕು ಮತ್ತು ಕೀಳರಿಮೆಯನ್ನು ಹೊಡೆದೊಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶರಣಪ್ಪ ಎಸ್.ಡಿ. ಹೇಳಿದರು.
ಅವರು ಶನಿವಾರ ಸಂಜೆ ಸ್ಥಳೀಯ ಜ. ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಸ್ನೇಹ ಸಮ್ಮೇಳನ-ಕ್ಷಿತಿಜ್-13 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನಗಳಲ್ಲಿ ಕೇಂದ್ರ ಲೋಕಸೇವಾ ಆಯೋಗಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಲ್ಲಿ ಬಹುಪಾಲು ಎಂಜಿನಿಯರಿಂಗ್ ಪದವಿ ಪಡೆದವರು ಇರುತ್ತಾರೆ. ಇಂತಹ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದರೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವುದರ ಜತೆಗೆ ಸಮಾಜಕ್ಕೆ ನಮ್ಮದೇ ಆದ ಕೊಡುಗೆಯನ್ನು ನೀಡಬಹುದು ಎಂದರು.
ನಾವು ಸಮಾಜಕ್ಕೆ ಏನಾದರು ಕೊಡುಗೆ ನೀಡಿದರೆ ಮಾತ್ರ ಸಮಾಜ ನಮ್ಮನ್ನು ಸ್ಮರಿಸುತ್ತದೆ. ಯಶಸ್ಸು ಎನ್ನುವದು ಸಿಹಿಯಾಗಿರುತ್ತದೆ. ಆದರೆ, ಅದರ ರಹಸ್ಯ ಮಾತ್ರ ಅಲ್ಪ ಕಹಿಯಾಗಿರುತ್ತದೆ. ಆ ದಿಸೆಯಲ್ಲಿ ವಿದ್ಯಾರ್ಥಿಗಳು ಒಳ್ಳೆಯ ವ್ಯಕ್ತಿತ್ವ ರೂಪಿಸಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಜೀವನದಲ್ಲಿ ಯಶಸ್ಸು ಸಾಧಿಸುವಂತೆ ಸಲಹೆ ನೀಡಿದರು. ಅತಿಥಿಗಳಾಗಿ ಆಗಮಿಸಿದ್ದ ಪ್ರೊ. ಎಸ್.ಟಿ. ಪಾಟೀಲ ಮಾತನಾಡಿ, ಒಂದು ಸಮಸ್ಯೆಗೆ ಹಲವಾರು ಪರಿಹಾರವಿದ್ದು, ಅದರಲ್ಲಿ ಮುಖ್ಯವಾಗಿ ಕ್ರಾಂತಿ ಮಾರ್ಗ ಮತ್ತು ಶಾಂತಿ ಮಾರ್ಗ. ಹಾಗಾಗಿ ಶಾಂತಿ ಮಾರ್ಗದತ್ತ ಸಾಗಿ ನಾವು ನಮ್ಮ ಗುರಿಯನ್ನು ತಲುಪಬೇಕು. ವಿದ್ಯಾಸಂಸ್ಥೆಗೆ ಬರಿ ಬಹುಮಹಡಿ ಕಟ್ಟಡವಿದ್ದರೆ ಸಾಲದು ಅಲ್ಲಿರುವ ನುರಿತ ಅಧ್ಯಾಪಕವೃಂದ ಹಾಗೂ ಅಲ್ಲಿನ ವಿದ್ಯಾರ್ಥಿಗಳು ಬಹು ಮಖ್ಯವಾದ ಆಸ್ತಿ. ಆದುದರಿಂದ ವಿದ್ಯಾರ್ಥಿಗಳು ಸಂಪನ್ಮೂಲ ಮತ್ತು ಗುರುಗಳ ಸಹಾಯದಿಂದ ಶ್ರದ್ಧೆಯಿಂದ ಕಲಿತು ದೇಶಕ್ಕೆ ಕೀರ್ತಿ ತರುವಂತೆ ಕರೆ ನೀಡಿದರು.
ಜ. ತೋಂಟದಾರ್ಯ ವಿದ್ಯಾಪೀಠದ ಆಡಳಿತಾಧಿಕಾರಿ ಪ್ರೊ. ಎಸ್.ಎಸ್. ಪಟ್ಟಣಶೆಟ್ಟಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯಗಳ ಕೊರತೆಯಿದ್ದರೂ ಸಹ ಅವರಿಗೆ ಅವಕಾಶ ಸಿಕ್ಕರೆ ಎಲ್ಲರನ್ನು ಮೀರಿ ಬೆಳೆಯುತ್ತಾರೆ. ಇಲ್ಲಿರುವ ವಿದ್ಯಾರ್ಥಿಗಳಲ್ಲಿ ಬಹುಪಾಲು ವಿದ್ಯಾರ್ಥಿಗಳು ಗ್ರಾಮೀಣ ಭಾಗದವರೆ ಇದ್ದು ಅವರಿಗೆ ಬೇಕಾಗುವ ಸೌಲಭ್ಯಗಳನ್ನು ಒದಗಿಸಲು ನಾವು ಸಿದ್ಧರಿದ್ದು, ಅದರ ಸದುಪಯೋಗ ಪಡೆದು ಸ್ಪರ್ಧಾ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವಂತೆ ಕೋರಿದರು.
ಕಾಲೇಜಿನ ಪ್ರಾಚಾರ್ಯ ಡಾ. ಪಿ.ಎ. ಹುಬ್ಬಳ್ಳಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಪಿ.ಎ.ಹುಬ್ಬಳ್ಳಿ ವಹಿಸಿದ್ದರು. ಈ ಸಂದರ್ಭದಲ್ಲಿ ಅತಿಥಿಗಳಾಗಿ ಎಂ.ಬಿ. ಬಡ್ನಿ, ಪ್ರೊ. ಸುಜಾತಾ ಭಾವಿಕಟ್ಟಿ, ಹರ್ಷದ ಬಟ್ಟದ ಮುಂತಾದವರು ಉಪಸ್ಥಿತರಿದ್ದರು. ಪ್ರೊ. ಶೈಲಜಾ ಕಾರ್ಯಕ್ರಮ ನಿರೂಪಿಸಿದರು.
ಇಂದಿನ ದಿನಗಳಲ್ಲಿ ಕೇಂದ್ರ ಲೋಕಸೇವಾ ಆಯೋಗಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಲ್ಲಿ ಬಹುಪಾಲು ಎಂಜಿನಿಯರಿಂಗ್ ಪದವಿ ಪಡೆದವರು ಇರುತ್ತಾರೆ. ಇಂತಹ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದರೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವುದರ ಜತೆಗೆ ಸಮಾಜಕ್ಕೆ ನಮ್ಮದೇ ಆದ ಕೊಡುಗೆಯನ್ನು ನೀಡಬಹುದು. ನಾವು ಸಮಾಜಕ್ಕೆ ಏನಾದರೂ ಕೊಡುಗೆ ನೀಡಿದರೆ ಮಾತ್ರ ಸಮಾಜ ನಮ್ಮನ್ನು ಸ್ಮರಿಸುತ್ತದೆ. ಯಶಸ್ಸು ಸಿಹಿಯಾಗಿರುತ್ತದೆ. ಆದರೆ, ಅದರ ರಹಸ್ಯ ಮಾತ್ರ ಕಹಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

